ಬಾಗೇಪಲ್ಲಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಗಾಗಿ ಪೊಲೀಸರ ಹುಡುಕಾಟ!

ಶನಿವಾರ ಈ ಅಪರಾಧ ವರದಿಯಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ದುಷ್ಕರ್ಮಿ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಗೋಲೂರು ಹೋಬಳಿಯ ಗ್ರಾಮವೊಂದರಲ್ಲಿ 5 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರದ ಘಟನೆ ನಡೆದಿದೆ. ಪೋಷಕರ ದೂರಿನ ಮೇರೆಗೆ ಬಾಗೇಪಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ಈ ಅಪರಾಧ ವರದಿಯಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ದುಷ್ಕರ್ಮಿ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪೋಷಕರು ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ನಂತರ ಘಟನೆ ಬೆಳಕಿಗೆ ಬಂದಿದ್ದು, ವೈದ್ಯರು ಲೈಂಗಿಕ ದೌರ್ಜನ್ಯವನ್ನು ದೃಢಪಡಿಸಿದ್ದಾರೆ.

ಈ ಸಂಬಂಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Casual Images
ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ: ನಾಗ್ಪುರದ ಸ್ವಯಂ ಘೋಷಿತ ದೇವಮಾನವ ಬಂಧನ

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಿ. ಎನ್. ಸತ್ಯನಾರಾಯಣರೆಡ್ಡಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎ. ಜಿ. ಸುಧಾಕರ್, ಪೊಲೀಸ್ ಇನ್ಸ್‌ಪೆಕ್ಟರ್ ಅಜಯ್ ಸಾರಥಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com