ಬದುಕಲು ಆಸೆಯೇ ಇಲ್ಲದಂತೆ ಮಾಡಿದ್ದಾರೆ; ನನ್ನ ಸಾವಿಗೆ ಪತಿ-ನಾದಿನಿ ಕಾರಣ: ಮದುವೆಯಾದ 4 ತಿಂಗಳಿಗೇ ಶಿಕ್ಷಕಿ ಆತ್ಮಹತ್ಯೆ!

ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Shwetha
ಶ್ವೇತಾ
Updated on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಶ್ವೇತಾ ಅವರು ತಮ್ಮ ತಾಯಿಗೆ ಡೆತ್‌ನೋಟ್ ಬರೆದಿದ್ದಾರೆ. ನನ್ನ ಸಾವಿಗೆ ನನ್ನ ಗಂಡ ಮತ್ತು ಅವರ ಅಕ್ಕನೇ ಕಾರಣ. ಅವರಿಂದ ನನಗೆ ಹಿಂಸೆ ಆಗುತ್ತಿತ್ತು. ಇನ್ನು ಮುಂದೆ ನನಗೆ ಬದುಕಲು ಆಸೆಯೇ ಇಲ್ಲ ಎನ್ನುವ ರೀತಿ ಮಾಡಿದ್ದಾರೆ. ನನ್ನ ಸಾವಿಗೆ ಅವರನ್ನ ಮಾತ್ರ ಸುಮ್ಮನೆ ಬಿಡಬೇಡ ಅಮ್ಮ. ನನ್ನಿಂದ ತಪ್ಪಾಗಿದೆ ಕ್ಷಮಿಸು ಇಂತಿ ನಿನ್ನ ಪ್ರೀತಿಯ ಮಗಳು ಶ್ವೇತಾ ಎಂದು ಬರೆದಿದ್ದಾರೆ.

Shwetha
ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್‌ನೋಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ಶ್ವೇತಾಳ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com