ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ. ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

ಬಂಧಿತ ಆರೋಪಿಗಳನ್ನು ಉಪ ತಹಶೀಲ್ದಾರ್‌ಗಳಾದ ದೀಪಕ್ ಮತ್ತು ಎಂ.ಪಿ. ರವಿ(ಕೆಂಗೇರಿ ನಾಡ ಕಚೇರಿ), ಕಂದಾಯ ನಿರೀಕ್ಷಕರಾದ ಕಿರಣ್ ಕುಮಾರ್ ಮತ್ತು ಅರುಣ್ ಕುಮಾರ್...
11 people arrested for forging documents to grab trust land worth Rs 100 cr. in Bengaluru
ಆದಿಚುಂಚನಗಿರಿ ಮಠ
Updated on

ಬೆಂಗಳೂರು: ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಆರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಪ ತಹಶೀಲ್ದಾರ್‌ಗಳಾದ ದೀಪಕ್ ಮತ್ತು ಎಂ.ಪಿ. ರವಿ(ಕೆಂಗೇರಿ ನಾಡ ಕಚೇರಿ), ಕಂದಾಯ ನಿರೀಕ್ಷಕರಾದ ಕಿರಣ್ ಕುಮಾರ್ ಮತ್ತು ಅರುಣ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿಗಳಾದ ಶಿವಪ್ರಸಾದ್ ಮತ್ತು ಸತೀಶ್ ಕುಮಾರ್ ಹಾಗೂ ಫ್ರಾನ್ಸಿಸ್, ಆರೋಗ್ಯಸ್ವಾಮಿ, ಶ್ರೀನಿವಾಸು, ನರೇಂದ್ರ ಕುಮಾರ್, ಜೋಸೆಫ್ ಎಂದು ಗುರುತಿಸಲಾಗಿದೆ.

ಅಕ್ರಮದಲ್ಲಿ ಭಾಗಿಯಾಗಿರುವ ಉಳಿದ ಶಂಕಿತರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

11 people arrested for forging documents to grab trust land worth Rs 100 cr. in Bengaluru
ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!

100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಈ ಆರು ಎಕರೆ ಭೂಮಿ, ಕೆಂಗೇರಿಯ ಕಂಬಿಪುರ ಗ್ರಾಮದ ಸರ್ವೆ ಸಂಖ್ಯೆ 43 ರಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಒಡೆತನದ 45 ಎಕರೆ ಆಸ್ತಿಯ ಭಾಗವಾಗಿದೆ. ಇದನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅದನ್ನು ಕಬಳಿಸಲು ಯತ್ನಿಸಿದ್ದಾರೆ ಎಂದು ಅವರು ಹೇಳಿದರು.

ಕೆಂಗೇರಿ ಹೋಬಳಿಯ ಕಂಬಿಪುರ ಗ್ರಾಮದ ಸರ್ವೆ ನಂಬರ್ 43ರಲ್ಲಿ 45 ಎಕರೆ ಜಮೀನು ಗುತ್ತಿಗೆ ಆಧಾರದಲ್ಲಿ 2004ರಲ್ಲಿ ಕಂದಾಯ ಇಲಾಖೆಯಿಂದ ಮಂಜೂರು ಮಾಡಿಸಿಕೊಳ್ಳಲಾಗಿತ್ತು. 45 ಎಕರೆಗಳ ಪೈಕಿ 35 ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ 2018ರಲ್ಲಿ ಸರ್ಕಾರದಿಂದ ಖರೀದಿಸಲಾಗಿತ್ತು. ಉಳಿದ 10 ಎಕರೆ ಜಾಗವನ್ನು ಗೋಶಾಲೆಗಾಗಿ ಮೀಸಲಿರಿಸಲಾಗಿತ್ತು. ಈ ವೇಳೆ ಫ್ರಾನ್ಸಿಸ್ ಎಂಬಾತ 6 ಎಕರೆ ಜಾಗವು ತನ್ನ ತಂದೆ ಆರೋಗ್ಯ ಸ್ವಾಮಿಗೆ ಸೇರಿದೆ ಎಂದು ತಕರಾರು ತೆಗೆದಿದ್ದ. ಜಮೀನಿಗೆ ವಾರಸುದಾರನಂತೆ ಬಿಂಬಿಸಿಕೊಂಡು ನಕಲಿ ಮರಣ ಪ್ರಮಾಣಪತ್ರ ಸೇರಿದಂತೆ ಇನ್ನಿತರೆ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ನ್ಯಾಯಾಲಯಕ್ಕೆ ಸುಳ್ಳು ದಾವೆ ಹೂಡಿ ಆದೇಶ ಪಡೆದುಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ಭೂಮಿ ಕಬಳಿಸಲು ಯತ್ನಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಫ್ರಾನ್ಸಿಸ್, ಕೆಲವು ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸೇರಿ, 1960-61ರ ಅವಧಿಯಲ್ಲಿ ಆಂಟನಿ ಅವರ ಮಗ ಆರೋಗ್ಯಸ್ವಾಮಿ ಎಂಬುವವರಿಗೆ ಸೈನಿಕನ ಕೋಟಾದಡಿಯಲ್ಲಿ ಸರ್ವೆ ಸಂಖ್ಯೆ 43 ರಲ್ಲಿ ಆರು ಎಕರೆ ಭೂಮಿಯನ್ನು ನೀಡಲಾಗಿದೆ ಎಂದು ಹೇಳುವ ದಾಖಲೆಗಳನ್ನು ನಕಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

"ಫ್ರಾನ್ಸಿಸ್ ಆರೋಗ್ಯಸ್ವಾಮಿ ಅವರ ಮಗ ಮತ್ತು ಕಾನೂನುಬದ್ಧ ಉತ್ತರಾಧಿಕಾರಿ ಎಂದು ಹೇಳಿಕೊಂಡು ನಕಲಿ ವಂಶವೃಕ್ಷ, ಮರಣ ಪ್ರಮಾಣಪತ್ರ, ಅನುದಾನ ಪ್ರಮಾಣಪತ್ರ ಮತ್ತು ಇತರ ಕಂದಾಯ ದಾಖಲೆಗಳು ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ" ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಟ್ಯಂತರ ರೂ. ಮೌಲ್ಯದ ಜಮೀನು ಕಬಳಿಸಲು ಫ್ರಾನ್ಸಿಸ್ ಜೊತೆ ಕಂದಾಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ತಾಲೂಕು ಕಚೇರಿಯ ಸರ್ಕಾರಿ ನೌಕರರು ಶಾಮೀಲಾಗಿದ್ದಾರೆ. ಮಧ್ಯವರ್ತಿಗಳ ಕುಮ್ಮಕ್ಕಿನಿಂದ ಉಪ ತಹಶಿಲ್ದಾರ್ ಆಗಿರುವ ಎಂ.ಪಿ. ರವಿ ಸುಳ್ಳು ವಂಶವೃಕ್ಷ ಪ್ರಮಾಣಪತ್ರ ಮಾಡಿಸಿಕೊಟ್ಟಿದ್ದರು. ಸಾಗುವಳಿ ಚೀಟಿ ಸೇರಿದಂತೆ ಇನ್ನಿತರೆ ದಾಖಲಾತಿಗಳನ್ನು ಸೃಷ್ಟಿಸಿದ್ದರು. ಈ ಸಂಬಂಧ ಸರ್ಕಾರಿ ನೌಕರರನ್ನು ಬಂಧಿಸಲಾಗಿದೆ.

ಪ್ರಮುಖ ಆರೋಪಿ ಫ್ರಾನ್ಸಿಸ್ ತನ್ನೊಂದಿಗೆ ತಂಡ ರಚಿಸಿಕೊಂಡು ಬೆಂಗಳೂರು ಸುತ್ತಮುತ್ತಲಿನ ಬೆಲೆಬಾಳುವ ಜಮೀನು ಕಬಳಿಸಲು ಯತ್ನಿಸಿರುವ ಶಂಕೆ ಇದೆ. ಈ ಬಗ್ಗೆ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದುನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com