

ಕಲಬುರಗಿ: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ ಸ್ಪಷ್ಟವಾಗಿದ್ದು, ರಾಜ್ಯ ಸರ್ಕಾರ ಯೋಜನೆಯನ್ನು ಹಿಂಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.
ಸೋಮವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗೆ ರೈತರ ಆಕ್ರೋಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಬೇಕು. ಸಮೀಕ್ಷೆ ನಡೆಸಲು ತೆರಳಿದ್ದ ಅಧಿಕಾರಿಗಳ ವಾಹನಗಳನ್ನು ರೈತರು ಸುತ್ತುವರಿದು (ಘೇರಾವ್) ಪ್ರತಿಭಟನೆ ನಡೆಸಿದ್ದು, ಸಮೀಕ್ಷಾ ತಂಡವನ್ನು ಹಿಂದಕ್ಕೆ ಓಡಿಸಿರುವ ಘಟನೆ ರೈತರು ಈ ಯೋಜನೆಯನ್ನು ಸ್ಪಷ್ಟವಾಗಿ ವಿರೋಧಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಇದ ವೇಳೆ ಬಿಡದಿಯಲ್ಲಿ ಟೌನ್‌ಶಿಪ್ ಹೆಸರಿನಲ್ಲಿ ಸರ್ಕಾರ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದ ಅವರು, ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೀದರ್ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸವನ್ನೂ ವಿಜಯೇಂದ್ರ ಟೀಕಿಸಿದರು.
ಮುಖ್ಯಮಂತ್ರಿಯವರ ಈ ಪ್ರವಾಸ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಅವರು ಈ ಪ್ರವಾಸದಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೇಳಲಿ. ಬಸವಕಲ್ಯಾಣಕ್ಕೆ ತೆರಳಿ ಅನುಭವ ಮಂಟಪ ವೀಕ್ಷಿಸಿದರು, ಛಾಯಾಚಿತ್ರ ತೆಗೆಸಿಕೊಂಡರು, ಬೀದರ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೇವಲ ಪ್ರದರ್ಶನಕ್ಕಾಗಿ ಕಾರ್ಯಕ್ರಮ ನಡೆಸಿ ಬೆಂಗಳೂರಿಗೆ ಹಿಂತಿರುಗಿದ್ದಾರೆ ಎಂದು ವ್ಯಂಗ್ಯವಾಡಿದರು.