BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು.
Ramachandregowda
ರಾಮಚಂದ್ರೇಗೌಡ
Updated on

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ ಇಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಸಾಥ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪಕ್ಕಾ ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು.

Ramachandregowda
Jurassic Park ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ!

ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಅತ್ಯಂತ ಪ್ರಭಾವಿ ನಾಯಕರಾಗಿದ್ದ ಇವರು, ಸತತವಾಗಿ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಇವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು.

2010 ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಇವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆದರೆ ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಈ ಪ್ರಕರಣದಲ್ಲಿ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿ ದೋಷಮುಕ್ತಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com