ಜಮೀರ್‌ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.
Thawar Chand gehlot, Zameer Ahmed Khan
ಥಾವರ್ ಚಂದ್ ಗೆಹ್ಲೋಟ್, ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನಿರಾಕರಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಮೀರ್ ಅಹ್ಮದ್ ಖಾನ್ ವಿರುದ್ಧ ಲೋಕಾಯುಕ್ತ ಕಾನೂನು ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

Thawar Chand gehlot, Zameer Ahmed Khan
ಇದೇನು ರಾಜ್ಯದ ಸಮಸ್ಯೆನಾ?: ಸಿದ್ದರಾಮಯ್ಯ ಜೊತೆ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್ ಜಾರಕಿಹೊಳಿ; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com