Kissing in Metro: ಮೈಮರೆತ ಜೋಡಿ,ಲಿಪ್ ಟು ಲಿಪ್ ಕಿಸ್ , ಸಾರ್ವಜನಿಕರ ಆಕ್ರೋಶ! Video

ಪ್ರಯಾಣಿಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಾರ್ವಜನಿಕ ಜಾಗದಲ್ಲಿ ಸಾಮಾನ್ಯ ಪ್ರಜ್ಞೆ ಮರೆತ ಜೋಡಿಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.
Kissing in Metro
ರೈಲಿನಲ್ಲಿ ಮೈ ಮರೆತ ಜೋಡಿ
Updated on

ಬೆಂಗಳೂರು: ನಮ್ಮ ಮೆಟ್ರೋ ರೈಲಿನೊಳಗೆ ಜೋಡಿಯೊಂದು ಮೈಮರೆತು, ಜನರ ಮುಂದೆಯೇ ಪರಸ್ಪರ ಲಿಪ್ ಕಿಸ್ಸಿಂಗ್ ಮಾಡುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ.

ನೇರಳೆ ಮಾರ್ಗದ ವೈಟ್‌ಫೀಲ್ಡ್ ಕಡೆಗೆ ಸಂಚರಿಸುವ ಮೆಟ್ರೋ ಮಾರ್ಗದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆ.ಆರ್. ಪುರಂ ಮೆಟ್ರೋ ನಿಲ್ದಾಣಕ್ಕೆ ರೈಲು ತಲುಪುವಷ್ಟರಲ್ಲಿ ಬೋಗಿಯಲ್ಲಿದ್ದ ಯುವ ಜೋಡಿಯೊಂದು ಸಹ-ಪ್ರಯಾಣಿಕರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಚುಂಬಿಸಿದ್ದಾರೆ. ಸಾರ್ವಜನಿಕವಾಗಿ ಲಿಪ್ ಟು ಲಿಪ್ ಕಿಸ್ ಮಾಡಿಕೊಂಡಿದೆ.

ಪ್ರಯಾಣಿಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಾರ್ವಜನಿಕ ಜಾಗದಲ್ಲಿ ಸಾಮಾನ್ಯ ಪ್ರಜ್ಞೆ ಮರೆತ ಜೋಡಿಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ, ಅದರಲ್ಲೂ ಕುಟುಂಬಸ್ಥರು, ಮಹಿಳೆಯರು ಮತ್ತು ಮಕ್ಕಳು ಪ್ರಯಾಣಿಸುವ ಮೆಟ್ರೋದಂತಹ ಜಾಗದಲ್ಲಿ ಇಂತಹ ವರ್ತನೆ ತಪ್ಪು ಮತ್ತು ಇದು ಸಾರ್ವಜನಿಕ ಮರ್ಯಾದೆಗೆ ಚ್ಯುತಿಯಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ವೈಯಕ್ತಿಕ ಸ್ವಾತಂತ್ರ್ಯದ ವಿಷಯದಲ್ಲಿ ಮೂಗು ತೂರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಇಂತಹ ವೈರಲ್ ವಿಡಿಯೋಗಳ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ಸ್ಪಂದಿಸಿ, ಪ್ರಯಾಣಿಕರಿಗೆ ಮುಜುಗರ ಉಂಟುಮಾಡುವ ಮತ್ತು ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಘಟನೆಗಳ ವಿರುದ್ಧ ದೂರು ದಾಖಲಿಸಿಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

Kissing in Metro
ನಮ್ಮ ಮೆಟ್ರೋ ಗಡುವು ಮತ್ತೆ ವಿಸ್ತರಣೆ: ಆಗಸ್ಟ್‌ಗೆ Pink Line; ಪೂರ್ಣ ಸೇವೆಗೆ 2027ರ ಮಾರ್ಚ್ ಗುರಿ..!

ಪ್ರಯಾಣಿಕರು ಇಂತಹ ಯಾವುದೇ ಘಟನೆಗಳು ನಡೆದರೆ ತಕ್ಷಣವೇ ಮೆಟ್ರೋ ಸಿಬ್ಬಂದಿಗೆ ಅಥವಾ ಭದ್ರತಾ ಸಿಬ್ಬಂದಿಗೆ (CISF) ಮಾಹಿತಿ ನೀಡುವಂತೆ ಕೋರಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com