Bengaluru traffic ನಿಯಂತ್ರಣಕ್ಕೆ ತಂತ್ರಜ್ಞಾನಕ್ಕೆ ಆದ್ಯತೆ ನೀಡಿ; ಸಂಚಾರ ಪೊಲೀಸರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು, ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಹೂಡಿಕೆದಾರರು ಬೆಂಗಳೂರನ್ನು ತಮ್ಮ ವ್ಯವಹಾರದ ಕೇಂದ್ರವನ್ನಾಗಿ ಆಯ್ಕೆ ಮಾಡುತ್ತಿದ್ದಾರೆ.
Home Minister Priyank Kharge chairs a meeting with traffic police officials on Monday.
ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ.
Updated on

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ತಂತ್ರಜ್ಞಾನ ಆಧಾರಿತ ಪರಿಹಾರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಸೂಚನೆ ನೀಡಿದರು.

ಸೋಮವಾರ ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಗರದ ಎಲ್ಲ ಸಂಚಾರ ವಿಭಾಗಗಳ ಉಪ ಪೊಲೀಸ್ ಆಯುಕ್ತರಿಗೆ (ಡಿಸಿಪಿ) ಪ್ರಮುಖ ಜಂಕ್ಷನ್‌ಗಳು ಹಾಗೂ ಹೆಚ್ಚು ವಾಹನ ಸಂಚಾರವಿರುವ ರಸ್ತೆಗಳಲ್ಲಿ ವೈಜ್ಞಾನಿಕ ಮತ್ತು ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ನಗರದ ತೀವ್ರ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್'ಮೆಂಟ್ ಸಿಸ್ಟಮ್ - ITMS, ಕೃತಕ ಬುದ್ಧಿಮತ್ತೆ (AI), ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳು, ನೈಜ ಸಮಯದ ಸಂಚಾರ ಮೇಲ್ವಿಚಾರಣೆ (Real-time Traffic Monitoring) ಹಾಗೂ ಮಾಹಿತಿ ಆಧಾರಿತ ಸಂಚಾರ ನಿರ್ವಹಣಾ ಕ್ರಮಗಳನ್ನು (Data-driven Traffic Management) ವ್ಯಾಪಕವಾಗಿ ಜಾರಿಗೊಳಿಸಲು ಸಮಗ್ರ ಕಾರ್ಯಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಪಘಾತ ಹೆಚ್ಚಾಗಿ ಸಂಭವಿಸುವ ಸ್ಥಳಗಳನ್ನು ಗುರುತಿಸಿ ವಿಶೇಷ ಕ್ರಮ ಕೈಗೊಳ್ಳುವುದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು, ಆ್ಯಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳ ವಾಹನಗಳಿಗೆ ಆದ್ಯತೆ ನೀಡುವುದು, ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸುವುದು ಹಾಗೂ ಸಾರ್ವಜನಿಕರ ಅನುಕೂಲವನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಸಂಚಾರ ವ್ಯವಸ್ಥೆ ರೂಪಿಸುವಂತೆ ಸಚಿವರು ಸೂಚಿಸಿದರು.

ಸಂಚಾರ ನಿರ್ವಹಣೆ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

Home Minister Priyank Kharge chairs a meeting with traffic police officials on Monday.
ಪ್ರತಿ ಠಾಣೆಗಳಲ್ಲಿ 2ನೇ ಭಾನುವಾರ ಪರಿಶಿಷ್ಟರ ಸಭೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆದೇಶ

ಸಭೆಯಲ್ಲಿ ನಗರದ ವಿವಿಧ ಸಂಚಾರ ವಿಭಾಗಗಳ ಡಿಸಿಪಿಗಳು ತಮ್ಮ ವ್ಯಾಪ್ತಿಯ ಸಂಚಾರ ಪರಿಸ್ಥಿತಿ, ದಟ್ಟಣೆ ಹೆಚ್ಚಿರುವ ಪ್ರದೇಶಗಳು, ಇದುವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಸಂಚಾರ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ಹಲವು ಸಲಹೆಗಳೂ ಚರ್ಚೆಗೆ ಬಂದವು.

ಆಧುನಿಕ ತಂತ್ರಜ್ಞಾನ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ನಡುವಿನ ಸಮನ್ವಯದ ಮೂಲಕ ಬೆಂಗಳೂರಿನ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಸಮಗ್ರ ಕಾರ್ಯತಂತ್ರ ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಪ್ರಿಯಾಂಕ್ ಖರ್ಗೆ, "ಬೆಂಗಳೂರು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು, ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಹೂಡಿಕೆದಾರರು ಬೆಂಗಳೂರನ್ನು ತಮ್ಮ ವ್ಯವಹಾರದ ಕೇಂದ್ರವನ್ನಾಗಿ ಆಯ್ಕೆ ಮಾಡುತ್ತಿದ್ದಾರೆ. ಜಾಗತಿಕ ನಗರಕ್ಕೆ ತಕ್ಕ ಮಟ್ಟದ ಸಂಚಾರ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ," ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com