50 ಲಕ್ಷ ರೂ ವರದಕ್ಷಿಣೆಗಾಗಿ ಕಿರುಕುಳ: ಪತ್ನಿಯನ್ನು ಕೊಲ್ಲಲು ಮಚ್ಚು ಹಿಡಿದು ಅಟ್ಟಾಡಿಸಿದ PSI ಭೈರಪ್ಪ ಕೊನೆಗೂ ಬಂಧನ!

ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸಪ್ಪನನ್ನು ಈಗ ಬಂಧಿಸಲಾಗಿದೆ.
PSI Bhyrappa
ಪಿಎಸ್ಐ ಭೈರಪ್ಪ
Updated on: 

ಬೆಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸಪ್ಪನನ್ನು ಈಗ ಬಂಧಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪನನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಕೆಲವು ಸಮಯದಿಂದ ಪಿಎಸ್ಐ ಭೈರಪ್ಪ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹ ತಾರಕಕ್ಕೇರಿದಾಗ, ಪಿಎಸ್ಐ ಭೈರಪ್ಪ ಮನೆಯಲ್ಲಿದ್ದ ಮಚ್ಚನ್ನು ಹಿಡಿದು ಪತ್ನಿ ಮತ್ತು ಮಾವನ ಮೇಲೆ ಹಲ್ಲೆಗೆ ಮುಂದಾಗಿದ್ದನು. ಹಲ್ಲೆಯ ಬೆನ್ನಲ್ಲೇ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

PSI Bhyrappa
ಮಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಉದ್ಯೋಗ ಕಲ್ಪಿಸಿದ್ದ ಬಂಗಾಳದ ಮೂವರು ವ್ಯಕ್ತಿಗಳ ಬಂಧನ!

ಆರಂಭದಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇನ್ನು ಪ್ರಾಥಮಿಕ ತನಿಖೆಯಲ್ಲಿ ಕಿರುಕುಳ, ಹಲ್ಲೆ ನಡೆಸಿದ್ದು ಬಯಲಾಗುತ್ತಿದ್ದಂತೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಭೈರಪ್ಪನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com