ಚಿಕ್ಕಬಳ್ಳಾಪುರ: 'ನಮ್ಮ ಪರವೇ ತೀರ್ಪು ಬರಲಿ'; ಜಡ್ಜ್ ಕುರ್ಚಿ ಮೇಲೆ ಬಿಳಿ ಸಾಸಿವೆ ಕಾಳು ಹಾಕಿ ಬ್ಲ್ಯಾಕ್ ಮ್ಯಾಜಿಕ್, ಮಹಿಳೆ ಅರೆಸ್ಟ್!

ನ್ಯಾಯಾಲಯದ ಕೊಠಡಿಯೊಳಗೆ ಮಹಿಳೆಯೊಬ್ಬರು ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Representative Image
ಪ್ರಾತಿನಿಧಿಕ ಚಿತ್ರAI Generated Illustration
Updated on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿರುವ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ (JMFC) ನ್ಯಾಯಾಲಯದ ಕುರ್ಚಿ ಮೇಲೆ ಮಾಟಮಂತ್ರ ನಡೆಸಿದ ಆರೋಪದ ಮೇಲೆ 65 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರ ಪೊಲೀಸರ ಪ್ರಕಾರ, ಮಂಜುಳಾ ಎಂದು ಗುರುತಿಸಲಾದ ಆರೋಪಿಯು ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿ, ನ್ಯಾಯಾಧೀಶರ ಆಸನದ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಚಿಮುಕಿಸುವ ಮೂಲಕ ಮಾಟಮಂತ್ರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ನ್ಯಾಯಾಲಯದ ಕೊಠಡಿಯೊಳಗೆ ಮಹಿಳೆಯೊಬ್ಬರು ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಎರಡು ದಿನಗಳ ಹಿಂದೆ ನ್ಯಾಯಾಧೀಶರ ಆಸನದ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಆ ಮಹಿಳೆ ಚಿಮುಕಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ' ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು, ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

Representative Image
ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆ ಕಾಡಿನಲ್ಲಿ ತಲೆಬುರುಡೆ ಪತ್ತೆ; ವಾಮಾಚಾರ ಶಂಕೆ?

'ಕರ್ನಾಟಕ ಅಮಾನವೀಯ, ದುಷ್ಟ ಮತ್ತು ವಾಮಾಚಾರ ಪ್ರತಿಬಂಧಕ ಹಾಗೂ ನಿರ್ಮೂಲನೆ ಕಾಯ್ದೆ-2017'ರ ಅಡಿಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ನ್ಯಾಯಾಲಯವು ಮಹಿಳೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com