ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಈ ಅಧಿಸೂಚನೆಯು ರಾಜ್ಯದ ಹಿತಾಸಕ್ತಿ, ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ತತ್ವಗಳು ಹಾಗೂ ರಾಷ್ಟ್ರೀಯ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
BJP seeks immediate withdrawal of PRC notification
ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
Updated on

ಬೆಂಗಳೂರು: ಕರ್ನಾಟಕ ಸರ್ಕಾರ ಹೊರಡಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ಕುರಿತ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ.

ಈ ಅಧಿಸೂಚನೆಯು ರಾಜ್ಯದ ಹಿತಾಸಕ್ತಿ, ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ತತ್ವಗಳು ಹಾಗೂ ರಾಷ್ಟ್ರೀಯ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಗೆ ಅರ್ಹ ನಾಗರಿಕರಿಗೆ ನೆರವಾಗುವ ಉದ್ದೇಶದಿಂದ ಶಾಶ್ವತ ನಿವಾಸಿ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಘೋಷಿಸಿದ್ದರು.

ಅದರ ಬೆನ್ನಲ್ಲೇ ರಾಜ್ಯ ಕಂದಾಯ ಇಲಾಖೆ ಪಿಆರ್‌ಸಿ ನೀಡುವ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಈ ಪ್ರಮಾಣಪತ್ರವು ಕರ್ನಾಟಕದ ಶಾಶ್ವತ ನಿವಾಸದ ದಾಖಲೆಯಾಗಿ ಪರಿಗಣಿಸಲಾಗುವುದು ಎಂದು ತಿಳಿಸಿತ್ತು.

BJP seeks immediate withdrawal of PRC notification
'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Video

ನಾಗರಿಕರು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ಬಿಜೆಪಿ, "ಜೂನ್ 26, 2026ರಂದು ಕರ್ನಾಟಕ ಸರ್ಕಾರ ಹೊರಡಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರಗಳ ಕುರಿತ ಅಧಿಸೂಚನೆಗೆ ಸಂಬಂಧಿಸಿದಂತೆ ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು" ಎಂದು ಮನವಿ ಮಾಡಿದೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗದಲ್ಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿ.ಟಿ. ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಿಜೆಪಿ ಮನವಿಯಲ್ಲೇನಿದೆ?

"ಸಂವಿಧಾನದ ರಕ್ಷಕರಾಗಿರುವ ನಿಮ್ಮ ಗಮನಕ್ಕೆ ಈ ವಿಷಯವನ್ನು ತರಲು ಬಯಸುತ್ತೇವೆ. ಈ ಅಧಿಸೂಚನೆಯು ರಾಜ್ಯದ ಹಿತಾಸಕ್ತಿ, ಭಾರತದ ಒಕ್ಕೂಟ ವ್ಯವಸ್ಥೆಯ ತತ್ವಗಳು ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ" ಎಂದು ಬಿಜೆಪಿ ತಿಳಿಸಿದೆ.

ವಿದೇಶಿಯರ ಗುರುತಿಸುವಿಕೆ, ಪೌರತ್ವ, ವಿದೇಶಿಯರ ಭಾರತ ಪ್ರವೇಶ ಹಾಗೂ ವಲಸೆ ಸಂಬಂಧಿತ ವಿಷಯಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಒಳಪಟ್ಟಿದ್ದು, ಸಂವಿಧಾನದ ಕೇಂದ್ರ ಪಟ್ಟಿಯ ಅಡಿಯಲ್ಲಿ ಬರುತ್ತವೆ ಎಂದು ಬಿಜೆಪಿ ಮನವಿಯಲ್ಲಿ ಉಲ್ಲೇಖಿಸಿದೆ.

ಆದ್ದರಿಂದ "ಶಾಶ್ವತ ನಿವಾಸಿ" ಎಂಬ ಹೊಸ ವರ್ಗವನ್ನು ಸೃಷ್ಟಿಸುವ ಸಂವಿಧಾನಾತ್ಮಕ ಅಥವಾ ಕಾನೂನುಬದ್ಧ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇಂತಹ ಕ್ರಮವು ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ತತ್ವಗಳನ್ನೇ ದುರ್ಬಲಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷ ವಾದಿಸಿದೆ.

ಈಗಾಗಲೇ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ಸೂಕ್ಷ್ಮ ಸಂದರ್ಭದಲ್ಲಿ ಈ ಅಧಿಸೂಚನೆ ಹೊರಡಿಸಿರುವುದು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಹೊಸ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ವಿಶೇಷವಾಗಿ ನೆರೆಯ ರಾಷ್ಟ್ರಗಳಿಂದ ಕಾನೂನುಬಾಹಿರವಾಗಿ ಭಾರತಕ್ಕೆ ಬಂದಿರುವ ವಲಸಿಗರು ಸುಲಭವಾಗಿ ಪಿಆರ್‌ಸಿ ಪಡೆದು ಬಳಿಕ ಭಾರತೀಯ ಪೌರತ್ವದ ಹಕ್ಕು ಮಂಡಿಸುವ ಹಾಗೂ ಮತದಾನದ ಹಕ್ಕು ಸೇರಿದಂತೆ ಸರ್ಕಾರಿ ಸೌಲಭ್ಯಗಳನ್ನು ಅಕ್ರಮವಾಗಿ ಪಡೆಯುವ ಅಪಾಯವಿದೆ ಎಂದು ಬಿಜೆಪಿ ಹೇಳಿದೆ.

ಪಿಆರ್‌ಸಿ ನೀಡುವ ಸಂಪೂರ್ಣ ಹೊಣೆಗಾರಿಕೆಯನ್ನು ಕಂದಾಯ ಇಲಾಖೆ ಅಧಿಕಾರಿಗಳಿಗೆ ವಹಿಸಿರುವುದರಿಂದ ಭ್ರಷ್ಟಾಚಾರ ಹಾಗೂ ನಕಲಿ ದಾಖಲೆಗಳ ಸೃಷ್ಟಿಗೆ ಅವಕಾಶ ಉಂಟಾಗುವ ಸಾಧ್ಯತೆ ಇದೆ ಎಂದು ಪಕ್ಷ ಆತಂಕ ವ್ಯಕ್ತಪಡಿಸಿದೆ. ಇತ್ತೀಚೆಗೆ ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಹಾಗೂ ಲೋಕ ಅದಾಲತ್‌ಗಳ ಮೂಲಕ ಅನುಮಾನಾಸ್ಪದ ರೀತಿಯಲ್ಲಿ ಜನನ ಪ್ರಮಾಣಪತ್ರಗಳನ್ನು ಪಡೆಯಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

2002ರ ವಿಶೇಷ ತೀವ್ರ ಪರಿಷ್ಕರಣೆ ನಿಯಮಗಳ ಪ್ರಕಾರ, 1987ರ ನಂತರ ಜನಿಸಿದವರು ತಮ್ಮ ಪೋಷಕರು ಅಥವಾ ಪೂರ್ವಜರ ಹೆಸರುಗಳು 2002ರ ಮತದಾರರ ಪಟ್ಟಿಯಲ್ಲಿ ಇರುವುದನ್ನು ದಾಖಲೆಗಳ ಮೂಲಕ ಸಾಬೀತುಪಡಿಸಬೇಕಾಗಿದೆ. ಈ ವ್ಯವಸ್ಥೆ ಈಗಾಗಲೇ ಸುರಕ್ಷಿತ, ಪಾರದರ್ಶಕ ಹಾಗೂ ಸುಸ್ಥಾಪಿತವಾಗಿದೆ ಎಂದು ಬಿಜೆಪಿ ತಿಳಿಸಿದೆ. "ಈ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ಗೊಂದಲ ಹಾಗೂ ಆತಂಕ ಸೃಷ್ಟಿಸುವ ಹೊಸ ಪಿಆರ್‌ಸಿ ವ್ಯವಸ್ಥೆಯನ್ನು ಜಾರಿಗೆ ತರುವ ಯಾವುದೇ ಸಮರ್ಥನೀಯ ಅಗತ್ಯ ಕಾಣುತ್ತಿಲ್ಲ" ಎಂದು ಪಕ್ಷ ಅಭಿಪ್ರಾಯಪಟ್ಟಿದೆ.

BJP seeks immediate withdrawal of PRC notification
ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?

ರಾಜ್ಯ ಸರ್ಕಾರ ಈ ಅಧಿಸೂಚನೆ ಹೊರಡಿಸುವ ಮೊದಲು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿತ್ತೇ ಎಂಬುದರ ಕುರಿತು ವಿವರವಾದ ವರದಿ ಕೇಳುವಂತೆ ಹಾಗೂ ಪಿಆರ್‌ಸಿ ನೀಡುವ ಮೊದಲು ಭಾರತೀಯ ಪೌರತ್ವವನ್ನು ಹೇಗೆ ಪರಿಶೀಲಿಸಲಾಗುತ್ತಿದೆ ಎಂಬ ಪ್ರಕ್ರಿಯೆಯ ಮಾಹಿತಿ ಪಡೆಯುವಂತೆ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ.

ಅಲ್ಲದೆ, ರಾಜ್ಯದಲ್ಲಿ ಶಾಂತಿ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭದ್ರತೆ ಕಾಪಾಡುವ ಹಿತದೃಷ್ಟಿಯಿಂದ ಈ ವಿವಾದಾತ್ಮಕ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದೆ.

ಇತ್ತೀಚಿನ ಎಸ್‌ಐಆರ್ ಪ್ರಕ್ರಿಯೆ ಆರಂಭವಾದ ಬಳಿಕ ನ್ಯಾಯಾಲಯಗಳು ಹಾಗೂ ಲೋಕ ಅದಾಲತ್‌ಗಳ ಮೂಲಕ ನೀಡಲಾದ ಜನನ ಪ್ರಮಾಣಪತ್ರಗಳ ಪ್ರಾಮಾಣಿಕತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ತನಿಖಾ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಬಿಜೆಪಿ ಮನವಿ ಮಾಡಿದೆ.

"ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಹಾಗೂ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ನಿಮ್ಮ ಸಾಂವಿಧಾನಿಕ ಜವಾಬ್ದಾರಿಯ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ತುರ್ತು ಎಂದು ಪರಿಗಣಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಬಿಜೆಪಿ ನಾಯಕರು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೂಡ ಕರ್ನಾಟಕದ ಪಿಆರ್‌ಸಿ ಅಧಿಸೂಚನೆಯನ್ನು ಸಂವಿಧಾನಾತ್ಮಕ ಹಾಗೂ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಪ್ರಶ್ನಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com