ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ: ಮೂವರು IPS ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್ ಚಿಟ್..!

ಮಂಗಳವಾರ ಹೊರಡಿಸಿದ ಮೂರು ಪ್ರತ್ಯೇಕ ಸರ್ಕಾರಿ ಆದೇಶಗಳಲ್ಲಿ, ಸಂಬಂಧಿತ ಐಪಿಎಸ್ ಅಧಿಕಾರಿಗಳು ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿ, ತಮ್ಮನ್ನು ಆರೋಪಗಳಿಂದ ಮುಕ್ತಗೊಳಿಸುವಂತೆ ಮನವಿ ಸಲ್ಲಿಸಿದ್ದರು.
Karnataka Blames RCB For Bengaluru Stampede
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣ (ಸಂಗ್ರಹ ಚಿತ್ರ)
Updated on

ಬೆಂಗಳೂರು: 2025ರ ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಈ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆ ಬಳಿಕ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ತವ್ಯ ಲೋಪದ ಆರೋಪದಡಿ ಅಂದಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಬಿ. ದಯಾನಂದ್, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್. ತೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಉಪವಿಭಾಗದ ಎಸಿಪಿ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಿದ್ದರು.

ಮಂಗಳವಾರ ಹೊರಡಿಸಿದ ಮೂರು ಪ್ರತ್ಯೇಕ ಸರ್ಕಾರಿ ಆದೇಶಗಳಲ್ಲಿ, ಸಂಬಂಧಿತ ಐಪಿಎಸ್ ಅಧಿಕಾರಿಗಳು ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿ, ತಮ್ಮನ್ನು ಆರೋಪಗಳಿಂದ ಮುಕ್ತಗೊಳಿಸುವಂತೆ ಮನವಿ ಸಲ್ಲಿಸಿದ್ದರು.

ಅಧಿಕಾರಿಗಳ ಲಿಖಿತ ಸಮರ್ಥನೆ, ಆಡಳಿತ ಇಲಾಖೆಯ ಅಭಿಪ್ರಾಯ ಹಾಗೂ ಲಭ್ಯ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಸಮರ್ಥ ಪ್ರಾಧಿಕಾರವು ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕೈಬಿಡಲು ತೀರ್ಮಾನಿಸಿದೆ.

ಸರ್ಕಾರದ ಆದೇಶದ ಪ್ರಕಾರ, ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧ ಹೊರಿಸಲಾಗಿದ್ದ ಎಲ್ಲ ಆರೋಪಗಳಿಂದ ಅವರನ್ನು ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ. ಹೀಗಾಗಿ, ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ ಇಲಾಖಾ ಕ್ರಮದಲ್ಲಿ ಅವರಿಗೆ ಸರ್ಕಾರ ಅಧಿಕೃತವಾಗಿ ಕ್ಲೀನ್ ಚಿಟ್ ನೀಡಿದಂತಾಗಿದೆ

Karnataka Blames RCB For Bengaluru Stampede
ಬೆಂಗಳೂರಿನಲ್ಲಿಂದು IPL 2026 ಉದ್ಘಾಟನೆ: ಕಾಲ್ತುಳಿತ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್, ಬಿಗಿ ಭದ್ರತೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com