ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಆರೋಪ; Influencer ಅಮುಕು ಡುಮುಕು ವಿರುದ್ಧ FIR ದಾಖಲು..!

ಬಾರ್‌ನಿಂದ ಹೊರಡುವ ವೇಳೆ ಮಹಿಳಾ ಸಿಬ್ಬಂದಿ ಅವರನ್ನು ತಡೆದು ಪ್ರಶ್ನಿಸಿದಾಗ, ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Social media influencer Manju alias Amuku Dumuku
ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು
Updated on

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಹಾಗೂ ಬಿಲ್ ಪಾವತಿಸುವ ವಿಚಾರದಲ್ಲಿ ಗಲಾಟೆ ನಡೆಸಿದ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 9ರಂದು ರಾತ್ರಿ ಮಂಜು ತಮ್ಮ ಸ್ನೇಹಿತರೊಂದಿಗೆ ನಗರದ ರೆಸ್ಟೋ ಬಾರ್‌ಗೆ ಭೇಟಿ ನೀಡಿ ಊಟ ಹಾಗೂ ಮದ್ಯ ಸೇವಿಸಿದ್ದರು. ಬಳಿಕ ಬಿಲ್ ಪಾವತಿಸುವ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರ ನಂತರ ಬಾರ್‌ನಿಂದ ಹೊರಡುವ ವೇಳೆ ಮಹಿಳಾ ಸಿಬ್ಬಂದಿ ಅವರನ್ನು ತಡೆದು ಪ್ರಶ್ನಿಸಿದಾಗ, ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ಸ್ಥಳದಲ್ಲಿದ್ದ ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ಅಮುಕು ಡುಮುಕು ಹಾಗೂ ಅವರ ಸ್ನೇಹಿತರ ವಿರುದ್ಧ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Social media influencer Manju alias Amuku Dumuku
ಡಾಗ್ ಸತೀಶ್ ಸ್ನೇಹ ಬಿಡು: BiggBoss ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com