'CM ಡಿ.ಕೆ ಶಿವಕುಮಾರ್ ಅವರು ಡ್ರಾಮಾ ಡೈಲಾಗ್ ರೀತಿ ಮಾತಾಡ್ತಾರೆ': ನಿಖಿಲ್ ಕುಮಾರಸ್ವಾಮಿ; Video

ಒಂದು ಕಡೆ ಪರಿಶೀಲನಾ ಸಮಿತಿ ರಚಿಸುತ್ತೇನೆ ಎನ್ನುತ್ತಾರೆ. ಮತ್ತೊಂದೆಡೆ ಮೂರು ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಅವರ ಮನಸ್ಸಿನಲ್ಲಿ ಬೇರೆ ಲೆಕ್ಕಾಚಾರವಿದೆ. ಹೊರಗೆ ಮಾತ್ರ ನಾಟಕ ಕಂಪನಿ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
JDS leader Nikhil Kumaraswamy and others at Bagalkote district
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ವಿಭಾಗಗಳ ನೆರೆ ಮತ್ತು ಬರ ಅಧ್ಯಯನ ತಂಡದೊಂದಿಗೆ ಬಾಗಲಕೋಟೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಿದ ಜೆಡಿಎಸ್ ನಾಯಕರು
Updated on

ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಟೀಕಿಸಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮುಖ್ಯಮಂತ್ರಿ ಬರೆದಿಟ್ಟ ನಾಟಕದ ಸಂಭಾಷಣೆಗಳನ್ನು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಾಗಲಕೋಟೆಯ ಬರಪೀಡಿತ ಪ್ರದೇಶಗಳ ಭೇಟಿ ವೇಳೆ ಕೆಂದೂರು ಗ್ರಾಮದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿ ಗೊಂದಲದಲ್ಲಿದ್ದಾರೆ ಎಂದು ಹೇಳಿದರು.

ಒಂದು ಕಡೆ ಪರಿಶೀಲನಾ ಸಮಿತಿ ರಚಿಸುತ್ತೇನೆ ಎನ್ನುತ್ತಾರೆ. ಮತ್ತೊಂದೆಡೆ ಮೂರು ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಅವರ ಮನಸ್ಸಿನಲ್ಲಿ ಬೇರೆ ಲೆಕ್ಕಾಚಾರವಿದೆ. ಹೊರಗೆ ಮಾತ್ರ ನಾಟಕ ಕಂಪನಿ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಯೋಜನೆಗೆ ಸಂಬಂಧಿಸಿದಂತೆ ತಮ್ಮ ತಂದೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಪ್ರಾಥಮಿಕ ಅಧಿಸೂಚನೆ ಹೊರಡಿಸಿರಲಿಲ್ಲ. ಕೇವಲ ಯೋಜನೆಗೆ ಸಂಬಂಧಿಸಿದ ಅಧಿಸೂಚನೆ ಮಾತ್ರ ಹೊರಡಿಸಿದ್ದರು ಎಂದು ನಿಖಿಲ್ ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಅವರು ಈ ಪ್ರದೇಶವನ್ನು ರೆಡ್‌ ಝೋನ್ ಎಂದು ಅಧಿಸೂಚನೆ ಹೊರಡಿಸಿದ್ದಾರೆ ಎಂದು ಸಿಎಂ ಆರೋಪಿಸುತ್ತಿದ್ದಾರೆ. ಅದು ನಿಜವಾಗಿದ್ದರೆ ಕಾನೂನುಬದ್ಧವಾಗಿ ತಿದ್ದುಪಡಿ ಮಾಡಬಹುದಿತ್ತು. ಇದೇ ವೇಳೆ ಇದು ಕುಮಾರಸ್ವಾಮಿ ಅವರ ಕನಸಿನ ಯೋಜನೆ ಎಂದೂ ಹೇಳುತ್ತಾರೆ. ಹಾಗಾದರೆ ಅದೇ 'ಮಗುವನ್ನು' ಈಗ ತಮ್ಮ ತಲೆಯ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

JDS leader Nikhil Kumaraswamy and others at Bagalkote district
Bidadi Township: ವಿರೋಧದ ನಡುವೆ ಮತ್ತೆ 4 ಗ್ರಾಮಗಳ 5,000 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!

ಡಿ.ಕೆ. ಶಿವಕುಮಾರ್ ಅವರನ್ನು ಮತ್ತೆ ಜೈಲಿಗೆ ಕಳುಹಿಸುವ ಸಂಚು ನಡೆಯುತ್ತಿದೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿದ ನಿಖಿಲ್, ಶಿವಕುಮಾರ್ ಅವರು ಜೈಲಿನಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ಕುಮಾರಸ್ವಾಮಿಯವರು. ಅವರ ತಾಯಿಯನ್ನು ಸಮಾಧಾನಪಡಿಸಿದ್ದೂ ಕುಮಾರಸ್ವಾಮಿಯವರು. ಆ ವಿಚಾರವನ್ನು ನೆನಪಿಟ್ಟುಕೊಂಡು ಇಂತಹ ಆಧಾರರಹಿತ ಹೇಳಿಕೆಗಳನ್ನು ಇಂದು ನೀಡುತ್ತಿದ್ದಾರೆ. ಅವರು ನಿಷ್ಕಳಂಕರಾಗಿದ್ದರೆ, ಮತ್ತೆ ಜೈಲಿಗೆ ಹೋಗುವ ಭಯ ಏಕೆ ಎಂದು ತಿರುಗೇಟು ನೀಡಿದರು.

JDS leader Nikhil Kumaraswamy and others at Bagalkote district
'ಬಿಡದಿ ಟೌನ್‌ಶಿಪ್ ನಮ್ಮ ಯೋಜನೆಯಲ್ಲ'; ರಾಜಕೀಯ ಸಂಚುಗಳಿಂದ ರೈತರ ಬದುಕು ಹಾಳು ಮಾಡಲಾಗುತ್ತಿದೆ: ಸಿಎಂ ಡಿ.ಕೆ ಶಿವಕುಮಾರ್

ಮತ್ತೊಬ್ಬ ಒಕ್ಕಲಿಗ ನಾಯಕ ಮುಖ್ಯಮಂತ್ರಿ ಆಗಿರುವುದರಿಂದ ದೇವೇಗೌಡ ಕುಟುಂಬಕ್ಕೆ ಅಸೂಯೆ ಆಗಿದೆ ಎಂಬ ಆರೋಪವನ್ನು ನಿಖಿಲ್ ತಳ್ಳಿಹಾಕಿದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದಾಗ ಮೊದಲಿಗೆ ಅಭಿನಂದಿಸಿದವರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಾನೂ ಇದ್ದೆವು. ಈಗ ಬಡ ರೈತರ ಪರವಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಅವರೊಂದಿಗೆ ಬಾದಾಮಿ ಮತ್ತು ಗುಳೇದಗುಡ್ಡ ತಾಲ್ಲೂಕಿನ ಹಲ್ಕುರ್ಕಿ, ಕೆಂದೂರು ಸೇರಿದಂತೆ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಬಳಿಕ ಬನಶಂಕರಿ ದೇವಿಯ ದರ್ಶನ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com