ರಾಯಚೂರಲ್ಲಿ ದಾರುಣ ಘಟನೆ: ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ; ಒಂದೂವರೆ ವರ್ಷದ ಕಂದಮ್ಮ ಬಲಿ!

ಮನೆಯಲ್ಲಿ ಮಲಗಿದ್ದ ಮಗು ಎಚ್ಚರಗೊಂಡು ಪೋಷಕರಿಗೆ ತಿಳಿಯದಂತೆ ರಸ್ತೆಗೆ ಬಂದಿದೆ. ಈ ವೇಳೆ ಹತ್ತಿರದಲ್ಲಿದ್ದ ಕೋಳಿ ಅಂಗಡಿಯ ಬಳಿ ಜಮಾಯಿಸಿದ್ದ ಬೀದಿ ನಾಯಿಗಳ ಹಿಂಡು ಮಗುವಿನ ಮೇಲೆ ಏಕಾಏಕಿ ದಾಳಿ ನಡೆಸಿವೆ.
 Anam
ಅನಂ
Updated on

ರಾಯಚೂರು: ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 18 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ ಬಲಿಯಾಗಿರುವ ಘಟನೆ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ಮನೆಯಲ್ಲಿ ಮಲಗಿದ್ದ ಮಗು ಎಚ್ಚರಗೊಂಡು ಪೋಷಕರಿಗೆ ತಿಳಿಯದಂತೆ ರಸ್ತೆಗೆ ಬಂದಿದೆ. ಈ ವೇಳೆ ಹತ್ತಿರದಲ್ಲಿದ್ದ ಕೋಳಿ ಅಂಗಡಿಯ ಬಳಿ ಜಮಾಯಿಸಿದ್ದ ಬೀದಿ ನಾಯಿಗಳ ಹಿಂಡು ಮಗುವಿನ ಮೇಲೆ ಏಕಾಏಕಿ ದಾಳಿ ನಡೆಸಿವೆ. ನಾಯಿಗಳು ಮಗುವನ್ನು ಮನಬಂದಂತೆ ಕಚ್ಚಿ ಎಳೆದಾಡಿವೆ. ಮಗುವಿನ ಚೀರಾಟ ಕೇಳಿ ಪೋಷಕರು ತಕ್ಷಣ ಸ್ಥಳಕ್ಕೆ ಓಡಿ ಬಂದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣವೇ ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸೂಚಿಸಿದರು. ದುರಾದೃಷ್ಟವಶಾತ್, ರಿಮ್ಸ್ ಆಸ್ಪತ್ರೆಗೆ ತಲುಪುವ ಮುನ್ನವೇ ಮಗು ದಾರಿ ಮಧ್ಯೆ ಸಾವನ್ನಪ್ಪಿದೆ.

 Anam
Bengaluru: ಬಾಲಕನ ಮೇಲೆ Rottweiler ನಾಯಿ ದಾಳಿ; ಮಾಲೀಕರ ವಿರುದ್ಧ ಪೊಲೀಸ್ ಕೇಸ್ ದಾಖಲು! Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com