ಗ್ರಾಮ ಪಂಚಾಯಿತಿಗಳಿಗೆ ಬಾಕಿ 2,186 ಕೋಟಿ ರೂ ಬಿಡುಗಡೆಗೆ ಒತ್ತಾಯ; ರಾಜ್ಯದ ಎಲ್ಲಾ ಸಂಸದರಿಗೆ ಸಚಿವ Eshwar Khandre ಪತ್ರ

2025-26ನೇ ಹಣಕಾಸು ವರ್ಷದ ಅನುದಾನವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡದಿರುವುದರಿಂದ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ತೀವ್ರ ಹಿನ್ನಡೆಯಾಗಿದೆ.
Eshwar Khandre
ಸಚಿವ ಈಶ್ವರ್ ಖಂಡ್ರೆ
Updated on

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಾಗಿರುವ 15ನೇ ಹಣಕಾಸು ಆಯೋಗದ ಅನುದಾನದಡಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬಾಕಿ ಇರುವ 2,186.20 ಕೋಟಿ ರೂ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದ ಎಲ್ಲಾ ಸಂಸದರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

2025-26ನೇ ಹಣಕಾಸು ವರ್ಷದ ಅನುದಾನವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡದಿರುವುದರಿಂದ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ತೀವ್ರ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರವು ಸಾಫ್ಟ್‌ವೇರ್‌ಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಕಾರಣವನ್ನಾಗಿ ನೀಡಿ ಅನುದಾನ ಬಿಡುಗಡೆ ವಿಳಂಬಗೊಳಿಸಿದೆ. ಆದರೆ ರಾಜ್ಯದಲ್ಲಿ ಮಳೆ ಕೊರತೆಯಿಂದ ಗ್ರಾಮೀಣ ಪ್ರದೇಶಗಳು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಅನುದಾನ ತಡೆಹಿಡಿದಿರುವುದು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರೊಂದಿಗೆ ಈ ವಿಷಯವನ್ನು ತುರ್ತಾಗಿ ಪ್ರಸ್ತಾಪಿಸಿ, ಬಾಕಿ ಇರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಬೇಕು ಎಂದು ಕರ್ನಾಟಕದ ಎಲ್ಲ ಸಂಸದರಿಗೆ ಖಂಡ್ರೆ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ವಿಧಿಸಿದ್ದ ಎಲ್ಲ ಷರತ್ತುಗಳನ್ನು ಪಾಲಿಸಿದ್ದರೂ, 2025-26ನೇ ಸಾಲಿನ ಗ್ರಾಮ ಪಂಚಾಯಿತಿಗಳಿಗೆ ಮೀಸಲಾದ 2,186.20 ಕೋಟಿ ರೂ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Eshwar Khandre
'ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ'; ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

ಈ ಸಂಬಂಧ ಇಲಾಖೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದಿದ್ದು, ತಾವೂ ವೈಯಕ್ತಿಕವಾಗಿ ಕೇಂದ್ರ ಪಂಚಾಯತ್ ರಾಜ್ ಸಚಿವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಖಂಡ್ರೆ ತಿಳಿಸಿದ್ದಾರೆ.

2024-25ನೇ ಸಾಲಿನ ಅನುದಾನ ಬಳಕೆ ಪ್ರಮಾಣಪತ್ರಗಳನ್ನು (Utilisation Certificates) ರಾಜ್ಯ ಸರ್ಕಾರ ಈಗಾಗಲೇ ಸಲ್ಲಿಸಿದೆ. ಅಲ್ಲದೆ, 2025ರ ಆಗಸ್ಟ್ ಗಡುವಿನೊಳಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗಳನ್ನು (GPDP) ಯಶಸ್ವಿಯಾಗಿ ಅಪ್‌ಲೋಡ್ ಮಾಡಲಾಗಿದೆ.

ಕೇಂದ್ರ ಸಚಿವಾಲಯ ಕೇಳಿದ್ದ ಎಲ್ಲಾ ಪ್ರಶ್ನೆಗಳಿಗೂ ಸಮರ್ಪಕ ಉತ್ತರಗಳನ್ನು ನೀಡಲಾಗಿದೆ. ಇಷ್ಟೆಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕೇವಲ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ ಅನುದಾನ ತಡೆಹಿಡಿಯುವುದು ಸಮಂಜಸವಲ್ಲ ಎಂದು ಸಚಿವರು ಹೇಳಿದ್ದಾರೆ.

Eshwar Khandre
'ದೇವೇಗೌಡರೇ ಹೊಟ್ಟೆ ಉರಿಗೆ ಮಾತಾಡಬೇಡಿ: ವಿಧಾನಸೌಧಕ್ಕೆ ಬಂದು ಸಲಹೆ ನೀಡಿ; ನೀಟ್ ಹಗರಣಕ್ಕೆ ಮೌನ, ಡಿಕೆಶಿ ವಿರುದ್ಧ ಹೋರಾಟವೇ?'

ಗ್ರಾಮೀಣಾಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗದಂತೆ ರಾಜ್ಯಕ್ಕೆ ಬಾಕಿ ಇರುವ 2,186.20 ಕೋಟಿ ರೂ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಎಲ್ಲಾ ಸಂಸದರಿಗೆ ಅವರು ಮನವಿ ಮಾಡಿದ್ದಾರೆ.

ಈ ಸಂಬಂಧ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕರ್ನಾಟಕದ ಎಲ್ಲಾ ಸಂಸದರಿಗೆ ಪತ್ರ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com