ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮಗೆ ಉಸಿರಾಟದ ತೊಂದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ.
H D Deve Gowda's wife Chennamma
ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 80 ವರ್ಷದ ಚೆನ್ನಮ್ಮ ಅವರನ್ನು ಗುರುವಾರ ರಾತ್ರಿ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನೂ ನಡೆಸಲಾಗುತ್ತಿದೆ.

ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದೊತ್ತಡ, ನಾಡಿಬಡಿತ ಸಾಮಾನ್ಯ ಸ್ಥಿತಿಯಲ್ಲಿದೆ. ಆದಾಗ್ಯೂ, ಉಸಿರಾಟದ ಸಮಸ್ಯೆಗೆ ಸಂಬಂಧಿಸಿದ ಚಿಕಿತ್ಸೆ ಮುಂದುವರಿದಿದೆ.

H D Deve Gowda's wife Chennamma
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್ ಕಾರಂತ್ ನೇತೃತ್ವದ ವಿವಿಧ ವಿಭಾಗಗಳ ತಜ್ಞ ವೈದ್ಯರ ತಂಡವ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಯಿ ಅನಾರೋಗ್ಯ ವಿಷಯ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮತ್ತು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ತಾಯಿಯ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com