GBA ಚುನಾವಣೆಗೆ ಹೊಸ ಡೆಡ್​ಲೈನ್: ಡಿಸೆಂಬರ್ 31ರೊಳಗೆ ಎಲೆಕ್ಷನ್ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಡಿಸೆಂಬರ್ 31, 2026 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ನಡೆಸುತ್ತವೆ ಎಂದು ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಕೆ ಮಾಡಿದ್ದ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ.
Greater Bengaluru Authority (GBA)
ಗ್ರೇಟರ್ ಬೆಂಗಳೂರು ಪ್ರಾಧಿಕಾರOnline Desk
Updated on

ನವದೆಹಲಿ: ಡಿಸೆಂಬರ್ 31, 2026 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ನಡೆಸುತ್ತವೆ ಎಂದು ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಕೆ ಮಾಡಿದ್ದ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ.

ಈ ಹಿಂದೆ GBA ಚುನಾವಣೆ ಪ್ರಕ್ರಿಯೆಯನ್ನು ಆಗಸ್ಟ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆಗಸ್ಟ್ ಒಳಗೆ ಚುನಾವಣೆ ನಡೆಸುವುದು ಅಸಾಧ್ಯ ಎಂದು ರಾಜ್ಯ ಸರ್ಕಾರ ಹಾಗೂ ಜಿಬಿಎ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಅದರಂತೆ, ಈ ಮನವಿಯನ್ನು ಪುರಸ್ಕರಿಸಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ಡಿಸೆಂಬರ್ 31ರೊಳಗೆ ಜಿಬಿಎ ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ಹೊಸ ಗಡುವು ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com