ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಹೃದಯಾಘಾತದಿಂದ ಸಾವು: ತಿಂಗಳಲ್ಲಿ ಎರಡನೇ ಘಟನೆ!

ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Shrikanath
ಶ್ರೀಕಾಂತ್
Updated on

ಶಿವಮೊಗ್ಗ: ಸ್ನೇಹಿತರ ಜೊತೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ. ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಶುಕ್ರವಾರ ತೆರಳಿ, ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ಶ್ರೀಕಾಂತ್ ತಂಗಿದ್ದರು. ಶನಿವಾರ ಗೆಳೆಯರೆಲ್ಲರೂ ಕೂಡಿ ಬೆಳಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು.

ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಕೆಲ ದಿನಗಳ ಹಿಂದಷ್ಟೇ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಕೂಡ ಕೊಡಚಾದ್ರಿ ಪ್ರವಾಸಕ್ಕೆ ತೆರಳಿ ಹೃದಯಾಘಾತದಿಂದ ನಿಧನ ಹೊಂದಿದ್ದರು.

Shrikanath
ಮೈಸೂರು: ಪತಿಯ ಕತ್ತು ಹಿಸುಕಿ ಕೊಂದು ಹೃದಯಾಘಾತ ಎಂದು ನಂಬಿಸಲು ಯತ್ನಿಸಿದ್ದ ಪತ್ನಿ ಸಿಕ್ಕಿಬಿದ್ದಿದ್ದೇ ರೋಚಕ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com