ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
HD Devegowda, Chennamma
ಹೆಚ್ ಡಿ ದೇವೇಗೌಡ, ಚೆನ್ನಮ್ಮ
Updated on

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ (HD Devegowda) ಪತ್ನಿ 85 ವರ್ಷದ ಚೆನ್ನಮ್ಮ (Chennamma) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಾಂಶಗಳು

* ಜೆಡಿಎಸ್ ವರಿಷ್ಠ ದೇವೇಗೌಡರ ಪತ್ನಿ ಚೆನ್ನಮ್ಮ(85) ನಿಧನ

* ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪತ್ನಿವಿಯೋಗ

* ಹೃದಯಾಘಾತವಾಗಿ ಚೆನ್ನಮ್ಮ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶ

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 6 ಜನ ಮಕ್ಕಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com