ಗ್ರಾಮೀಣ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ₹1 ಕೋಟಿ ರೂ ಹೆಚ್ಚುವರಿ ಅನುದಾನ- ಸಿಎಂ DKS ಘೋಷಣೆ

ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆಗೆ ಸೂಚಿಸಿದರು.
CM DK Shivakumar and shalini rajneesh
ಸಿಎಂ ಡಿಕೆ ಶಿವಕುಮಾರ್, ಶಾಲಿನಿ ರಜನೀಶ್
Updated on

ಬೆಂಗಳೂರು: ಗ್ರಾಮೀಣ ತಾಲ್ಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಾಗಿ ₹1 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಘೋಷಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೊಸ ಬೋರ್‌ವೆಲ್‌ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ ಎಂದರು.ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆಗೆ ಸೂಚಿಸಿದರು.

ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆ. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4G ವಿನಾಯಿತಿ ನೀಡಬೇಕು. ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್‌ಗಿಳಿದು ಆಡಳಿತಾತ್ಮಕ ಟೀಮ್‌ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜುಲೈ 18ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಕೊರತೆಯಾಗಿದ್ದು, 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವವಿದೆ. ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ ಶೇ. 67 ರಷ್ಟು ಕೊರತೆಯಾಗಿದೆ. ಉಳಿದಂತೆ ಮಲೆನಾಡಿನಲ್ಲಿ ಶೇ.43, ಕರಾವಳಿ ಭಾಗದಲ್ಲಿ ಶೇ. 35, ಉತ್ತರ ಒಳನಾಡಿನಲ್ಲಿ ಶೇ. 33 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ.31 ರಷ್ಟು ಮಳೆ ಕೊರತೆಯಾಗಿದೆ ಎಂದರು.

ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ. ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದೆ.ರೈತರು ಕಡಿಮೆ‌ ನೀರಿನ‌ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಪೂರ್ಣ ವಿವರಗಳನ್ನು 'ಫ್ರೂಟ್ಸ್' (FRUITS) ತಂತ್ರಾಂಶದ ಮೂಲಕ ಸಿದ್ಧವಾಗಿಟ್ಟುಕೊಂಡು, ಪ್ರತಿಯೊಂದು ಪರಿಹಾರವೂ ತಳಮಟ್ಟದ ಅರ್ಹ ಫಲಾನುಭವಿಗೆ ತಲುಪುವಂತೆ ನೋಡಿಕೊಳ್ಳಬೇಕು. ರಾಜ್ಯದ ಯಾವುದೇ ಹಳ್ಳಿ ಅಥವಾ ನಗರದ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಳ್ಳಬಾರದು. ಸ್ಥಳೀಯ ನೀರಿನ ಮೂಲಗಳಿಲ್ಲದಿದ್ದರೆ, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್‌ಗಳ ಮೂಲಕ ತಕ್ಷಣವೇ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಮಳೆನೀರು ಕೊಯ್ಲಿನ ಕುರಿತು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

CM DK Shivakumar and shalini rajneesh
ಭಾನುವಾರ ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಡಿ.ಕೆ ಶಿವಕುಮಾರ್; ಇಲ್ಲಿದೆ ಕಾರಣ...

ಬರ ಪರಿಸ್ಥಿತಿಯ ವೈಜ್ಞಾನಿಕ ಅಧ್ಯಯನಕ್ಕಾಗಿ ಕೇಂದ್ರದ ತಂಡವನ್ನು ತಕ್ಷಣವೇ ಕಳುಹಿಸುವಂತೆ ಮತ್ತು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com