

ಬೆಂಗಳೂರು: ಬೆಂಗಳೂರಿನಲ್ಲಿಯೂ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಮಳೆಯಾಗಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.