ಗಣಿ ಇಲಾಖೆಗೆ ಮೇಜರ್​​ ಸರ್ಜರಿ: ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಬರೋಬ್ಬರಿ 160 ಅಧಿಕಾರಿಗಳು ಎತ್ತಂಗಡಿ!

ಗಣಿ ಇಲಾಖೆಯಲ್ಲಿ ಒಂದೇ ಬಾರಿಗೆ ಬರೋಬ್ಬರಿ 160 ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Karnataka CM DK Shivakumar
ಡಿಕೆ ಶಿವಕುಮಾರ್online desk
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರು ಗಣಿ ಇಲಾಖೆಗೆ ಮೇಜರ್​​ ಸರ್ಜರಿ ಮಾಡಿದ್ದು, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಭರ್ಜರಿ ಶಾಕ್​ ನೀಡಿದ್ದಾರೆ.

ಗಣಿ ಇಲಾಖೆಯಲ್ಲಿ ಒಂದೇ ಬಾರಿಗೆ ಬರೋಬ್ಬರಿ 160 ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ.

ದಶಕಗಳ ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸ್ವಂತ ಹಾಗೂ ನೆರೆಯ ಜಿಲ್ಲೆಗಳಲ್ಲಿ ಬೀಡು ಬಿಟ್ಟಿದ್ದ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇದೀಗ ಎತ್ತಂಗಡಿ ಮಾಡಿದೆ.

Karnataka CM DK Shivakumar
ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಾತಿ ಪ್ರಮಾಣಪತ್ರ; ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ!

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹೆಚ್ಚಿನ ಉಪ ನಿರ್ದೇಶಕರು ತಮ್ಮ ಸ್ವಂತ ಜಿಲ್ಲೆಗಳಲ್ಲಿ ಅಥವಾ ನೆರೆಯ ಜಿಲ್ಲೆಗಳಲ್ಲಿಯೇ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದಾರೆ ಅಥವಾ ಆಡಳಿತಾತ್ಮಕ ಹಾಗೂ ಸಾರ್ವಜನಿಕ ದೂರುಗಳನ್ನು ಎದುರಿಸುತ್ತಿದ್ದಾರೆ. ಇಂತಹ ದೀರ್ಘಕಾಲದ ಕಾರ್ಯಾವಧಿಯು ಸ್ವಹಿತಾಸಕ್ತಿಗಳಿಗೆ ಎಡೆಮಾಡಿಕೊಡುತ್ತದೆ ಹಾಗೂ ಇಲಾಖೆಯ ಘನತೆಗೆ ಧಕ್ಕೆ ತರುವ ಕಾರಣ ಸ್ಥಳೀಯ ಮಟ್ಟದ ಏಕಸ್ವಾಮ್ಯವನ್ನು ಮುರಿಯಲು ಮತ್ತು ಸಾಂಖ್ಯಿಕ ಅಕ್ರಮಗಳನ್ನು ತಡೆಗಟ್ಟಲು, ಇಲಾಖೆಯ ಪ್ರಮುಖ ಆದಾಯ ಸಂಗ್ರಹಣಾ ಕಾರ್ಯಗಳಿಗೆ ಯಾವುದೇ ಅಡಚಣೆಯಾಗದಂತೆ, ವಸ್ತುನಿಷ್ಠತೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿಈ ಕೂಡಲೇ ಜಾರಿಗೆ ಬರುವಂತೆ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿರೋದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ವರ್ಗಾಯಿಸಿದ ಹುದ್ದೆಗೆ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.

ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗಣಿ ಇಲಾಖೆಯಲ್ಲಿ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಜುಲೈ 1ರಂದು ನಡೆದಿದ್ದ ಗಣಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರಿಂದ ಈ ವಿಷಯ ಪ್ರಸ್ತಾಪವಾಗಿತ್ತು. ಈ ಬಗ್ಗೆ ಕಡತ ಮಂಡಿಸುವಂತೆ ಸಭೆಯಲ್ಲೇ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರಿಗೆ ಸಿಎಂ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com