ಬೆಂಗಳೂರಿನಲ್ಲೂ ಐಸಿಸ್ ಉಗ್ರರಿಗೆ ಹಣಕಾಸು ನೆರವು; ಯುವಕರ ಬ್ರೇನ್‌ವಾಶ್ ಮಾಡಿ ಸಿರಿಯಾಗೆ ರವಾನೆ: 8 ಸ್ಥಳಗಳಲ್ಲಿ ED ದಾಳಿ

ಯುವಕರನ್ನು ಮೂಲಭೂತವಾದಕ್ಕೆ ಒಳಪಡಿಸುವ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಹಲವು ಸ್ಥಳಗಳನ್ನು ಶೋಧಿಸಿದೆ.
ED raids in bengaluru
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಿಷೇಧಿತ ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಮಂಗಳವಾರ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.

ಯುವಕರನ್ನು ಮೂಲಭೂತವಾದಕ್ಕೆ ಒಳಪಡಿಸುವ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಹಲವು ಸ್ಥಳಗಳನ್ನು ಶೋಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಎಂಟು ಸ್ಥಳಗಳ ಮೇಲೆ ಕೇಂದ್ರ ತನಿಖಾ ಸಂಸ್ಥೆ ದಾಳಿ ನಡೆಸಿದ್ದು, ಅಕ್ರಮ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ನಿಬಂಧನೆಗಳ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ED raids in bengaluru
ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

ಇಕ್ರಾ ವೆಲ್ಫೇರ್ ಟ್ರಸ್ಟ್, ಗೈಡೆನ್ಸ್ ಫಾರ್ ಮ್ಯಾನ್‌ಕೈಂಡ್ ಮತ್ತು ಕೆಲವು ವ್ಯಕ್ತಿಗಳನ್ನು ಒಳಗೊಂಡ ಐಸಿಸ್ ನೇಮಕಾತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ.

ಆರೋಪಿಗಳು ಬೆಂಗಳೂರಿನ ಮುಸ್ಲಿಂ ಯುವಕರನ್ನು ಐಸಿಸ್ ಸಿದ್ಧಾಂತದತ್ತ ಆಕರ್ಷಿಸಲು ‘ಇಕ್ರಾ ಕ್ಯಾಂಪ್’ ಎಂಬ ವ್ಯಕ್ತಿತ್ವ ವಿಕಾಸ ಕಾರ್ಯಾಗಾರವನ್ನು ಆಯೋಜಿಸುತ್ತಿದ್ದರು. ಇದರ ಮೂಲಕ ಬೆಳೆದ ‘ಕುರ್‌ಆನ್ ಸರ್ಕಲ್’ ಎಂಬ ವಾರಾಂತ್ಯದ ಅಧ್ಯಯನ ಕೂಟಗಳ ಮೂಲಕ ಯುವಕರನ್ನು ಗುರುತಿಸಿ ಬ್ರೇನ್‌ವಾಶ್ ಮಾಡಲಾಗುತ್ತಿತ್ತು. ತಮ್ಮ ಸ್ವಂತ ಉಳಿತಾಯ, ಖಾಸಗಿ ವ್ಯಕ್ತಿಗಳು ಹಾಗೂ ‘ಇಕ್ರಾ ವೆಲ್ಫೇರ್ ಟ್ರಸ್ಟ್’ ಮತ್ತು ‘GFM ಟ್ರಸ್ಟ್’ ಗಳ ಮೂಲಕ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದರು. ಈ ಹಣವನ್ನು ಯುವಕರ ನೇಮಕಾತಿ ಮತ್ತು ಪ್ರಯಾಣದ ವೆಚ್ಚಕ್ಕೆ ಬಳಸಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.

ಬ್ರೇನ್‌ವಾಶ್‌ಗೊಳಗಾದ ಯುವಕರನ್ನು ಟರ್ಕಿಯ ಮಾರ್ಗವಾಗಿ ಸಿರಿಯಾಗೆ ಅಕ್ರಮವಾಗಿ ಕಳುಹಿಸಿ, ಭಾರತ ಸರ್ಕಾರದೊಂದಿಗೆ ಮೈತ್ರಿ ಹೊಂದಿರುವ ಸಿರಿಯಾ ಸರ್ಕಾರದ ವಿರುದ್ಧ ಐಸಿಸ್ ಪರವಾಗಿ ಯುದ್ಧ ಮಾಡಲು ನೆರವು ನೀಡಲಾಗುತ್ತಿತ್ತು ಎಂದು ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com