ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು: ಇಲ್ಲಿ Airport ನಿರ್ಮಿಸಿದರೆ ಹೆಚ್ಚು ಅನುಕೂಲ; ಸೋಮಣ್ಣ ಹೇಳಿಕೆಗೆ ಪರಮೇಶ್ವರ್ ಬೆಂಬಲ

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ
Parameshwara
ಡಾ. ಜಿ. ಪರಮೇಶ್ವರ್
Updated on

ಬೆಂಗಳೂರು: ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬದಲು ತುಮಕೂರು ಜಿಲ್ಲೆಯ ಶಿರಾದಲ್ಲಿ ಸ್ಥಾಪಿಸಬೇಕು ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಆಗ್ರಹದ ನಡುವೆ ಕರ್ನಾಟಕದ ಡಿಸಿಎಂ ಪರಮೇಶ್ವರ್​​ ಕೂಡ ಇದೇ ರೀತಿ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಏರ್‌ಪೋರ್ಟ್​​ ನಿರ್ಮಿಸಿ ಎಂದು ಕಳೆದ 25 ವರ್ಷಗಳಿಂದ ಹೇಳುತ್ತಿದ್ದೇನೆ. ಆ‌ ಮೇಲೆ ಬಿಡಿದಿ ಸೇರಿದಂತೆ ಬೇರೆಬೇರೆ ಜಾಗ ಗುರುತಿಸಿದ್ದಾರೆ. ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು, ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ನಮಗೂ ಅನುಕೂಲವಾಗುತ್ತೆ ಎಂದವರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ ಎಂದು ಹೇಳಿದರು.

ತುಮಕೂರು ಲೋಕಸಭಾ ಸಂಸದ ಸೋಮಣ್ಣ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು ಅವರಿಗೆ ಪ್ರಸ್ತಾವಿತ ವಿಮಾನ ನಿಲ್ದಾಣವನ್ನು ಸಿರಾದಲ್ಲಿ ಸ್ಥಾಪಿಸಬೇಕೆಂದು ಪತ್ರ ಬರೆದ ಕೆಲವು ದಿನಗಳ ನಂತರ ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

Parameshwara
ತುಮಕೂರಿನ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕೇಂದ್ರ ವಿಮಾನಯಾನ ಸಚಿವರಿಗೆ ಸಚಿವ ವಿ. ಸೋಮಣ್ಣ ಪತ್ರ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com