

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದೆ. ತನ್ನ ಜನಪ್ರಿಯ 'ನಂದಿನಿ' ಬ್ರ್ಯಾಂಡ್‌ನ ಬೆಣ್ಣೆ ಮತ್ತು ತುಪ್ಪದ ದರವನ್ನು ದಿಢೀರ್ ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ನಾಳೆಯಿಂದಲೇ ಜಾರಿಗೆ ಬರಲಿವೆ.
ತುಪ್ಪದ ದರವನ್ನು ಪ್ರತಿ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹಾಗೆಯೇ ಬೆಣ್ಣೆಯ ಬೆಲೆಯನ್ನು ಪ್ರತಿ ಕೆಜಿಗೆ 22 ರೂ. ಏರಿಕೆ ಮಾಡಲಾಗಿದೆ. ಈ ನೂತನ ದರಗಳು ಜುಲೈ 24 ರಿಂದ (ಶುಕ್ರವಾರ) ಅಧಿಕೃತವಾಗಿ ಜಾರಿಗೆ ಬರಲಿವೆ. ರಾಜ್ಯಾದ್ಯಂತ ಇರುವ ಎಲ್ಲಾ ಕೆಎಂಎಫ್ ಮಳಿಗೆಗಳಲ್ಲಿ ಈ ಹೊಸ ದರಗಳು ಅನ್ವಯವಾಗಲಿವೆ ಎಂದು ತಿಳಿದುಬಂದಿದೆ.
ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯು ಕೇವಲ ಗೃಹ ಬಳಕೆದಾರರಿಗೆ ಮಾತ್ರವಲ್ಲದೆ, ಹೋಟೆಲ್ ಮತ್ತು ಬೇಕರಿ ಉದ್ಯಮದ ಮೇಲೂ ದೊಡ್ಡ ಪರಿಣಾಮ ಬೀರಲಿದೆ. ತುಪ್ಪ ಮತ್ತು ಬೆಣ್ಣೆಯನ್ನು ಹೆಚ್ಚಾಗಿ ಬಳಸುವ ಸಿಹಿ ತಿಂಡಿ ತಯಾರಕರು ಹಾಗೂ ಹೋಟೆಲ್ ಮಾಲೀಕರು ಈ ದರ ಏರಿಕೆಯಿಂದ ಕಂಗೆಟ್ಟಿದ್ದಾರೆ.
ಬೆಲೆ ಏರಿಕೆಗೆ ಕೆಎಂಎಫ್ ಸಮರ್ಥನೆ: ಹಾಲು ಒಕ್ಕೂಟಗಳ ನಿರ್ವಹಣಾ ವೆಚ್ಚ, ಪ್ಯಾಕೇಜಿಂಗ್ ಸಾಮಗ್ರಿಗಳ ಬೆಲೆ ಹಾಗೂ ಸಾಗಣೆ ವೆಚ್ಚ ಗಣನೀಯವಾಗಿ ಹೆಚ್ಚಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.
ಖಾಸಗಿ ಬ್ರ್ಯಾಂಡ್‌ಗಳ ದರಕ್ಕೆ ಹೋಲಿಸಿದರೆ ನಂದಿನಿ ಉತ್ಪನ್ನಗಳ ಬೆಲೆ ಇಂದಿಗೂ ಅತ್ಯಂತ ಸ್ಪರ್ಧಾತ್ಮಕವಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ವರಮಹಾಲಕ್ಷ್ಮಿ ಹಬ್ಬ ಸೇರಿದಂತೆ ಸಾಲು ಸಾಲು ಹಬ್ಬಗಳ ದಿನಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ ಈ ದರ ಏರಿಕೆ ಜಾರಿಗೆ ಬಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಹೊಸದರಗಳು ಇಂತಿದೆ:
PRODUCT --- QUANTITY -- RATE (in Rs)
Ghee Sachet -- 500ml -- 358
Ghee Sachet -- 1Litre -- 715
Ghee Pet Jar -- 500ml -- 268
GHee Pet Jar -- 1litre -- 735
GHee Tin -- 1Litre -- 750
Butter Blister Pack -- 10grams -- 600
Salter Butter -- 100grams -- 70
Salted Butter -- 500grams -- 310
Unsalted Butter -- 200grams -- 135
Unsalted Butter -- 500grams -- 330
ಕರ್ನಾಟಕ ಸಹಕಾರ ಹಾಲು ಒಕ್ಕೂಟದ ಈ ಹಠಾತ್ ನಿರ್ಧಾರದಿಂದಾಗಿ ಸಾಮಾನ್ಯ ಜನರ ಮಾಸಿಕ ಬಜೆಟ್ ಮೇಲೆ ಹೆಚ್ಚಿನ ಹೊರೆ ಬೀಳಲಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.