

ಶಿವಾಜಿನಗರದಲ್ಲಿ ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಅಧಿಕಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
ಕರ್ತವ್ಯನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಅವರು ತಮ್ಮ ಕಚೇರಿಯಲ್ಲಿ ಆಹ್ವಾನಿಸಿ ಸನ್ಮಾನಿಸಿದರು. ಕರ್ತವ್ಯನಿಷ್ಠೆ, ಧೈರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಬದ್ಧತೆಯಿಂದ ಸೇವೆ ಸಲ್ಲಿಸಿದ ಅಧಿಕಾರಿಗಳ ಕಾರ್ಯವನ್ನು ಸಚಿವರು ಶ್ಲಾಘಿಸಿ, ನಗರದ ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.
ಶಿವಾಜಿನಗರದ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ತೆರಳಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಬೀದಿ ಬದಿ ವ್ಯಾಪಾರಿಗಳು ಹಲ್ಲೆ ನಡೆಸಿದ್ದರು.