ಪಶ್ಚಾತ್ತಾಪದಿಂದಲ್ಲ, ವಿದ್ಯಾರ್ಥಿಗಳ ಒತ್ತಡದಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಿಯಾಂಕ್ ಖರ್ಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Priyank Kharge and Dharmendra Pradhan
ಪ್ರಿಯಾಂಕ್ ಖರ್ಗೆ, ಧರ್ಮೇಂದ್ರ ಪ್ರಧಾನ್
Updated on

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಹಾಗೂ ಹೊಣೆಗಾರಿಕೆಯನ್ನೂ ಒಪ್ಪಿಕೊಂಡಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ನಿರಂತರ ಪ್ರತಿಭಟನೆಗಳ ಒತ್ತಡದಿಂದಲೇ ಪ್ರಧಾನ್ ರಾಜೀನಾಮೆ ನೀಡಿದರು ಎಂದು ಅವರು ಹೇಳಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಧಾನ್ ಅವರ ರಾಜೀನಾಮೆ ಪತ್ರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆಗಾರಿಕೆಯನ್ನು ಒಪ್ಪಿಕೊಂಡಿರುವ ಯಾವುದೇ ಉಲ್ಲೇಖವಿಲ್ಲ. ಬದಲಿಗೆ, "ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ದುರುಪಯೋಗ ಮಾಡಿಕೊಳ್ಳದಂತೆ ತಡೆಯಲು" ರಾಜೀನಾಮೆ ನೀಡುತ್ತಿರುವುದಾಗಿ ಅವರು ಸಮರ್ಥಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

"ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಆತ್ಮಸಾಕ್ಷಿಯ ಪ್ರೇರಣೆಯಿಂದಲೂ ಅಲ್ಲ, ಹೊಣೆಗಾರಿಕೆ ಸ್ವೀಕರಿಸಿದ್ದರಿಂದಲೂ ಅಲ್ಲ. ದೇಶದ ವಿದ್ಯಾರ್ಥಿಗಳ ಹೋರಾಟದಿಂದಾಗಿ ಅವರು ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು ಎಂಬುದು ಸ್ಪಷ್ಟ ಎಂದು ಖರ್ಗೆ ಹೇಳಿದರು.

ಮೇ 15ರಿಂದ ಜುಲೈ 25ರವರೆಗೆ, ಅಂದರೆ ಮೂರು ತಿಂಗಳ ನಂತರ ಪ್ರಧಾನ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ರಾಜೀನಾಮೆ ನೀಡಿರುವುದನ್ನು ಅವರು ಪ್ರಶ್ನಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ನಡೆದಿದೆ ಎಂದು ಮೇ ತಿಂಗಳಲ್ಲೇ ಒಪ್ಪಿಕೊಂಡಿದ್ದರೂ, ಕೇಂದ್ರ ಸರ್ಕಾರ ಈ ವಿವಾದದ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂದು ಆರೋಪಿಸಿದರು.

ಅವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳುತ್ತಿಲ್ಲ. ರಾಷ್ಟ್ರವಿರೋಧಿ ಶಕ್ತಿಗಳಿಗೆ ಲಾಭವಾಗದಂತೆ ತಡೆಯಲು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

Priyank Kharge and Dharmendra Pradhan
ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್‌ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಬಂದು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕು ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸರ್ಕಾರದ ಸ್ಪಷ್ಟ ಕಾರ್ಯಯೋಜನೆಯನ್ನು ಪ್ರಕಟಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

ಪ್ರಧಾನಿ ಸಂಸತ್ತಿಗೆ ಬಂದು ವಿದ್ಯಾರ್ಥಿಗಳಿಗೆ ಉತ್ತರ ನೀಡಬೇಕು. ಅವರ ಭವಿಷ್ಯಕ್ಕಾಗಿ ಸರ್ಕಾರದ ರೂಪುರೇಷೆ ಏನು? ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮತ್ತು ಆಶ್ರುವಾಯು ಪ್ರಯೋಗಕ್ಕೆ ಆದೇಶ ನೀಡಿದ್ದು ಯಾರು? ಈ ಪ್ರಶ್ನೆಗಳಿಗೆ ಸಂಸತ್ತಿನಲ್ಲಿ ಉತ್ತರ ಸಿಗಬೇಕು ಎಂದು ಹೇಳಿದರು.

ಘಟನೆಗಳ ಕ್ರಮವನ್ನು ವಿವರಿಸಿದ ಮಲ್ಲಿಕಾರ್ಜುನ ಖರ್ಗೆ, ಮೇ 3ರಂದು ನೀಟ್ ಪರೀಕ್ಷೆ ನಡೆದಿದ್ದು, ಮೇ 7ರಂದು ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದವು. ಮೇ 8ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪೊಲೀಸರನ್ನು ಸಂಪರ್ಕಿಸಿತು. ಮೇ 15ರಂದು ಧರ್ಮೇಂದ್ರ ಪ್ರಧಾನ್ ಸಾರ್ವಜನಿಕವಾಗಿ ಸೋರಿಕೆಯನ್ನು ಒಪ್ಪಿಕೊಂಡರೂ, ಜುಲೈ 25ರಂದು ರಾಜೀನಾಮೆ ನೀಡಿದರು ಎಂದು ಹೇಳಿದರು.

ಪ್ರವೇಶ ಪ್ರಕ್ರಿಯೆ ವಿಳಂಬದಿಂದ ಲಕ್ಷಾಂತರ ವಿದ್ಯಾರ್ಥಿಗಳು ಅನಿಶ್ಚಿತತೆಗೆ ಒಳಗಾಗಿದ್ದು, ಸುಮಾರು 20 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ಅನೇಕರು ಉಪವಾಸ ಸತ್ಯಾಗ್ರಹ ನಡೆಸಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲು ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com