ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ! Video

ನೀರು ಹಂಚಿಕೆ ವಿಚಾರವಾಗಿ ಸಾಧಕ ಬಾಧಕಗಳ ಚರ್ಚೆ ನಡೆದ ಬಳಿಕ ತಮಿಳುನಾಡಿಗೆ ನೀರು ಬಿಡಲು CWRC ಸೂಚನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
KRS Dam
ಕೆಆರ್‌ಎಸ್ ಜಲಾಶಯ
Updated on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದು, ಕರುನಾಡಲ್ಲಿ ಬರದ ಭೀತಿ ಆವರಿಸಿದೆ. ಇಂಥಹ ಪರಿಸ್ಥಿತಿಯಲ್ಲೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ಮಹತ್ವದ ಸೂಚನೆ ನೀಡಿದೆ.

ನೀರು ಹಂಚಿಕೆ ವಿಚಾರವಾಗಿ ಸಾಧಕ ಬಾಧಕಗಳ ಚರ್ಚೆ ನಡೆದ ಬಳಿಕ ತಮಿಳುನಾಡಿಗೆ ನೀರು ಬಿಡಲು CWRC ಸೂಚನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಮಿಳುನಾಡಿಗೆ ನೀರು ಬಿಡಲು CWRC ಮಹತ್ವದ ಸೂಚನೆ ನೀಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿದ್ದು, ಈ ಬಗ್ಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ತಮಿಳುನಾಡಿನ ಒತ್ತಡದ ಮೇರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಉನ್ನತ ಮಟ್ಟದ ಸಭೆಯನ್ನು ಜುಲೈ 22ರಂದು ದೆಹಲಿಯಲ್ಲಿ ಕರೆಯಲಾಗಿತ್ತು. ಕಳೆದ ಸಭೆಯಲ್ಲೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಯಾವುದೇ ಸೂಚನೆ ನೀಡಿರಲಿಲ್ಲ.

ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಹೇಳಿದೆ. ಆದ್ರೆ ಇದಕ್ಕೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ನಮಗೆ ನೀರಿನ ಕೊರತೆ ಇದೆ, ನಾನು ಸಿಎಂ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ. ನ‌ಮಗೆ ಮಳೆ ಇಲ್ಲ, ವರ್ಷ ಪೂರ್ತಿ ಕುಡಿಯುವ ನೀರು ಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

KRS Dam
14 ವರ್ಷಗಳ ಬಳಿಕ ಮತ್ತೆ 'ಕಾವೇರಿ' ಮಾತುಕತೆ: ಫಲ ಕೊಡಲಿದೆಯೇ ಡಿ.ಕೆ ಶಿವಕುಮಾರ್-ಜೋಸೆಫ್ ವಿಜಯ್ ಭೇಟಿ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com