'ನಿನ್ನ ರೇಟ್ ಎಷ್ಟು' ಎಂದು ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಬಂಧಿತನನ್ನು ವಿಜಯ್ ರಾಘವ್ (42ವ) ಎಂದು ಗುರುತಿಸಲಾಗಿದ್ದು, ಆತ ಹಣ್ಣು ವ್ಯಾಪಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Accused arrest in Bengaluru
ಆರೋಪಿ ವಿಜಯ್ ರಾಘವ್ ಬಂಧನ
Updated on

ಬೆಂಗಳೂರಿನಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ವೈರಲ್‌ ಆದ ಬಳಿಕ ಆರೋಪಿಯನ್ನು ಗುರುತಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧಿತನನ್ನು ವಿಜಯ್ ರಾಘವ್ (42ವ) ಎಂದು ಗುರುತಿಸಲಾಗಿದ್ದು, ಆತ ಹಣ್ಣು ವ್ಯಾಪಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ "ನಿನ್ನ ರೇಟ್ ಎಷ್ಟು?" ಎಂದು ಕೇಳಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಎನ್‌ಆರ್‌ಐ ಲೇಔಟ್‌ನ 42 ವರ್ಷದ ಹಣ್ಣು ವ್ಯಾಪಾರಿ ಒಬ್ಬನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

ಕೆಲಸ ಮುಗಿಸಿ ಮನೆಗೆ ತೆರಳಲು ಕ್ಯಾಬ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ತನ್ನನ್ನು ಬೆದರಿಸಿ, ಅಶ್ಲೀಲ ಹಾಗೂ ಲೈಂಗಿಕವಾಗಿ ಅವಮಾನಿಸುವ ಮಾತುಗಳನ್ನಾಡಿ, ಹಣದ ಆಮಿಷವೊಡ್ಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಘಟನೆಯ ಒಂದು ಭಾಗವನ್ನು ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ತಮಗೆ ಉಂಟಾದ ಭಯ ಹಾಗೂ ಅವಮಾನವನ್ನು ವಿವರಿಸಿದ್ದರು.

ದೂರು ಹಾಗೂ ವಿಡಿಯೊ ಸಾಕ್ಷ್ಯದ ಆಧಾರದ ಮೇಲೆ ತನಿಖೆ ಆರಂಭಿಸಿದ ರಾಮಮೂರ್ತಿ ನಗರ ಪೊಲೀಸರು, ಆರೋಪಿಯ ಸ್ಕೂಟರ್‌ನ ನೋಂದಣಿ ಸಂಖ್ಯೆ KA 03 KQ 6190 ಮೂಲಕ ಆತನನ್ನು ಪತ್ತೆಹಚ್ಚಿದರು.

Accused arrest in Bengaluru
'ನಿನ್ನ ರೇಟ್ ಎಷ್ಟು?': ಬೆಂಗಳೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಗುರುತು ಪತ್ತೆ; Video

ಆರೋಪಿಯ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಜಯ್ ರಾಘವ್ ಎಂಬಾತನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿ, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್‌ 75 ಮತ್ತು 79ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಹಿಳೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಇಂತಹ ಕಿರುಕುಳವನ್ನು ಯಾವುದೇ ಕಾರಣಕ್ಕೂ ಸಹಜವೆಂದು ಒಪ್ಪಿಕೊಳ್ಳಬಾರದು ಎಂದು ಒತ್ತಾಯಿಸಿ, ಆರೋಪಿಯ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.

ಈ ಪ್ರಕರಣವು ಬೀದಿ ಕಿರುಕುಳದಂತಹ ಘಟನೆಗಳಲ್ಲಿ ವಿಡಿಯೊ ಸಾಕ್ಷ್ಯಗಳು ಪೊಲೀಸರ ತ್ವರಿತ ಕ್ರಮಕ್ಕೆ ಹೇಗೆ ನೆರವಾಗುತ್ತವೆ ಎಂಬುದನ್ನು ಮತ್ತೊಮ್ಮೆ ತೋರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com