ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ: CWRC ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಕೋಲಾರ ಸೇರಿದಂತೆ ಕಾವೇರಿ ಜಲವನ್ನು ನಂಬಿಕೊಂಡಿರುವ ರೈತರ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ.
Ramalinga Reddy
ರಾಮಲಿಂಗಾ ರೆಡ್ಡಿ
Updated on

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ತೀವ್ರ ಬರಗಾಲವಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಕೂಡ ಮಳೆಯಾಗುತ್ತಿಲ್ಲ. ಹೀಗಿರುವಾಗ ಕೆಆರ್​​ಎಸ್​​ ಜಲಾಶಯದಿಂದ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ನೀಡಿರುವ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.

ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಕೋಲಾರ ಸೇರಿದಂತೆ ಕಾವೇರಿ ಜಲವನ್ನು ನಂಬಿಕೊಂಡಿರುವ ರೈತರ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ. ಇಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ ನಡೆಸಿ, CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Ramalinga Reddy
ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ; Video

ಮಹತ್ವದ ಚರ್ಚೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರ ಸಂಬಂಧ ಒಂದು ಕಡೆ ದೆಹಲಿಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ಮಾಡಿದ್ದರೆ, ಇತ್ತ ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸಿದರು. ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಜಲಾನಯನದ ಅಧಿಕಾರಿಗಳು ಹಾಗೂ ವಕೀಲರ ಜೊತೆ ಮಹತ್ವದ ಚರ್ಚೆ ನಡೆದಿದ್ದು, ಕೆಆರ್ ಎಸ್ ಅಣೆಕಟ್ಟಿನಿಂದ ಹಾಲಿ ಲಭ್ಯವಿರುವ ನೀರಿನ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಸಭೆ ಮುಕ್ತಾಯದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ರಾಮಲಿಂಗಾರೆಡ್ಡಿ, ಸದ್ಯ 46 ಟಿಎಂಸಿ ನೀರು ಮಾತ್ರ ಲಭ್ಯವಿದೆ, ಇದರಲ್ಲಿ 10 ಜಿಲ್ಲೆಗೆ ಕುಡಿಯಲು ಮಾತ್ರ 12 ಟಿಎಂಸಿ ನೀರು ಬೇಕಾಗುತ್ತದೆ. ಹೀಗಾಗಿ CWRC ಆದೇಶ ಪಾಲಿಸಲು ಸಾಧ್ಯವಿಲ್ಲದ ಕಾರಣ, ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ. ಇಂದೇ ಅದನ್ನು ಸಲ್ಲಿಸುತ್ತೇವೆ. ಅವರ ಲೆಕ್ಕದ ಪ್ರಕಾರ 39 ಟಿಎಂಸಿ ನೀರು ಬಿಡಬೇಕಿತ್ತು. ಸಾಕಷ್ಟು ಮಳೆ ಸುರಿದಿದ್ದರೆ ಮಾತ್ರ ಕೇಳಿದಷ್ಟು ಕೊಡಬೇಕಿತ್ತು. ನಮ್ಮಲ್ಲೇ ಶೇ. 66ರಷ್ಟು ಮಳೆ ಕಡಿಮೆ ಆಗಿದೆ ಎಂದರು.

ದೆಹಲಿಯಲ್ಲಿ ಕರ್ನಾಟಕ ಪರ ವಾದವನ್ನು ಶ್ರೀರಾಮಯ್ಯನವರು ಮುಂದುವರಿಸುತ್ತಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com