ಕಾವೇರಿ ನೀರಿನ ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರಿಗೆ ಆಹ್ವಾನ!

ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
CM DK Shivakumar
ಸಿಎಂ ಡಿಕೆ ಶಿವಕುಮಾರ್
Updated on

ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಗುರುವಾರ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

CM DK Shivakumar
ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!

“ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ದೆಹಲಿ ಸರ್ಕಾರವನ್ನು ಭೇಟಿ ಮಾಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ಡಿಎಂಕೆ ನಾಯಕ ಅನ್ಬುಮಣಿ ಸಲಹೆ ನೀಡಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ಪರಸ್ಪರ ಕಿತ್ತಾಟ ಮಾಡಲು ಇಷ್ಟವಿಲ್ಲ. ನೆಲದ ಕಾನೂನು ಇದೆ. ನಾವು ಪರಸ್ಪರ ಗೌರವಿಸಬೇಕು. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕು” ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ಮಾಡಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?” ಎಂದು ಮರುಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com