ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
CWMA orders Karnataka Govt to release 3,500 cusecs of Cauvery water to Tamil Nadu
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ ನೀರು ಹರಿಸಬೇಕು ಎಂದು CWRC ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು CWMA ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಾಧಿಕಾರವು CWRC ನೀಡಿದ್ದ ಆದೇಶವನ್ನು ಎತ್ತಿಹಿಡಿದಿದ್ದು ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿದೆ.

CWMA orders Karnataka Govt to release 3,500 cusecs of Cauvery water to Tamil Nadu
CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಇಂದು ಮಧ್ಯಾಹ್ನ ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ CWMA ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಖುದ್ದಾಗಿ ಭಾಗವಹಿಸಿ ರಾಜ್ಯದ ಜಲಾಶಯಗಳ ನೀರಿನ ಅಭಾವದ ಪರಿಸ್ಥಿತಿಯನ್ನು ವಿವರಿಸಿದರು. ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com