'ಮೋದಿ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ'?: ಬೆಂಗಳೂರಿನಲ್ಲಿ ನೀಟ್ ಪ್ರತಿಭಟನಾಕಾರನ ಮೇಲೆ ಭೀಕರ ಹಲ್ಲೆ; FIR ದಾಖಲು

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ನವರು ಈ ಕೃತ್ಯ ಎಸಗಿದ್ದಾರೆ ಎಂದು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಆರೋಪಿಸಿದೆ.
Narendra Modi
ನರೇಂದ್ರ ಮೋದಿonline desk
Updated on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ ಎಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 19 ವರ್ಷದ ವಿದ್ಯಾರ್ಥಿ ಮೇಲೆ ಭೀಕರ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಜುಲೈ 28 ರಂದು ಜಾಲಹಳ್ಳಿ ಪ್ರದೇಶದಲ್ಲಿ ನಡೆದಿದ್ದು, ಎರಡು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮುಸುಕುಧಾರಿ ವ್ಯಕ್ತಿಗಳು, ನಾನು ಮನೆಗೆ ಹೋಗುವಾಗ ನನ್ನನ್ನು ತಡೆದು ಮರದ ದಿಮ್ಮಿಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವಿದ್ಯಾರ್ಥಿ ದೂರಿನಲ್ಲಿ ಆರೋಪಿಸಿದ್ದಾರೆ.

ಜುಲೈ 28 ರ ರಾತ್ರಿ, ತನ್ನ ಸದಸ್ಯರಲ್ಲಿ ಒಬ್ಬರ ಮೇಲೆ "ಶಂಕಿತ ಗೂಂಡಾಗಳು" ಭೀಕರ ಹಲ್ಲೆ ನಡೆಸಿದ್ದಾರೆ ಎಂದು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್(AISA) ವಿದ್ಯಾರ್ಥಿ ಸಂಘಟನೆಯ ಹೇಳಿದೆ. ಅಲ್ಲದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ನವರು ಈ ಕೃತ್ಯ ಎಸಗಿದ್ದಾರೆ ಆರೋಪಿಸಿದೆ.

ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ನೀತಿಯನ್ನು ವಿರೋಧಿಸಿ ನಡೆದ ದೇಶವ್ಯಾಪಿ ವಿದ್ಯಾರ್ಥಿ-ಯುವಜನ ಪ್ರತಿಭಟನೆಯಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿ ಸಕ್ರಿಯವಾಗಿ ಭಾಗವಹಿಸಿದ್ದರು.

Narendra Modi
CJP ಪ್ರತಿಭಟನಾಕಾರರಿಗೆ AAP ಬೆಂಬಲ; 'ಬಲಪಂಥೀಯ ಗೂಂಡಾಗಳಿಂದ' ರಕ್ಷಣೆ ನೀಡುವ ಭರವಸೆ!

ದುಷ್ಕರ್ಮಿಗಳು, “ಮೋದಿ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ?” ಎಂದು ಬೆದರಿಕೆ ಹಾಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದೂರು ಬಂದ ನಂತರ, ಜುಲೈ 29 ರಂದು ನಾಲ್ವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ನಾವು ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಮತ್ತು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ಅವರು ಹೇಳಿದ್ದಾರೆ.

ಈ ಘಟನೆಯನ್ನು ಖಂಡಿಸಿದ AISA, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com