ಸರ್ವ ಪಕ್ಷ ಸಭೆಯಲ್ಲಿ ನಿರ್ಧಾರ ಆಗುವವರೆಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ: ರಾಮಲಿಂಗಾ ರೆಡ್ಡಿ ಖಡಕ್ ಹೇಳಿಕೆ

ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
Transport Minister Ramalinga reddy
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
Updated on

ಬೆಂಗಳೂರು: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್‌ ನೀರು ಹರಿಸಬೇಕೆಂಬ CWMA ಆದೇಶ ಕುರಿತು ಪ್ರತಿಕ್ರಿಯಿಸಿದರು. ಸದ್ಯಕ್ಕೆ ಕುಡಿಯೋ ನೀರಿಗೆ ಸಮಸ್ಯೆಯಿಲ್ಲ, ಆದ್ರೆ ರೈತರಿಗೆ ಬೆಳೆ ಬೆಳೆಯೋಕೆ ನೀರು ಕೊಡಲು ಆಗಲ್ಲ ಎಂದಿದ್ದಾರೆ.

CWMA ನೀರು ಬಿಡೋಕೆ ಹೇಳಿದೆ. ಕಳೆದ 30 ವರ್ಷಗಳಿಂದ ವಾದ ಮಾಡಿದ್ದವರೇ ಈಗಲೂ ವಾದ ಮಾಡಿದ್ದಾರೆ. ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

CWRC ನಿರ್ಧಾರವನ್ನು ಎತ್ತಿಹಿಡಿದಿದ್ದ CWMA, ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು ಸುಮಾರು 4 ಟಿಎಂಸಿ ನೀರನ್ನು ಹರಿಸುವಂತೆ ಸೂಚಿಸಿತ್ತು. ಆದರೆ, ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಮತ್ತು ಜಲಾಶಯಗಳಲ್ಲಿನ ನೀರಿನ ಕೊರತೆಯನ್ನು ಗಣನೆಗೆ ತೆಗೆದುಕೊಂಡು, ಭಾನುವಾರದವರೆಗೆ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Transport Minister Ramalinga reddy
ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ನಿರ್ಧಾರ..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com