ಸಿದ್ದರಾಮಯ್ಯ ವಿರುದ್ದ 37 ಶಾಸಕರಿಂದ ಸತೀಶ್‌ ಜಾರಕಿಹೊಳಿ ಸಹಿ ಸಂಗ್ರಹ: ಇಬ್ಬರ ವಿರುದ್ಧ FIR

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ" ಎಂಬ ಗಂಭೀರ ಆರೋಪ ಮಾಡಲಾಗಿತ್ತು
 Satish Jarkiholi
ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬವರು ದೂರು ದಾಖಲಿಸಿದ್ದಾರೆ. ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ "ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ" ಎಂಬ ಗಂಭೀರ ಆರೋಪ ಮಾಡಲಾಗಿತ್ತು.

ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದರು. ಹೀಗಾಗಿ ಸತೀಶ್ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್​​ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರನ್ನು ಸ್ವೀಕರಿಸಿರುವ ಬೆಳಗಾವಿ ಸಿಇಎನ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ನಕಲಿ ಫೇಸ್‌ಬುಕ್ ಖಾತೆಯ ಹಿಂದಿರುವ ವ್ಯಕ್ತಿಗಳು ಯಾರು? ಇದರ ಹಿಂದಿರುವ ಉದ್ದೇಶವೇನು? ಎಂಬ ಬಗ್ಗೆ ತಾಂತ್ರಿಕ ತನಿಖೆ ಆರಂಭಿಸಿದ್ದಾರೆ.

 Satish Jarkiholi
ನಾನು kpcc ಅಧ್ಯಕ್ಷನಾಗುವುದು ಅನಿವಾರ್ಯವಲ್ಲ: ನಾನು ಯಾವುದೇ ಬೇಡಿಕೆ ಇಟ್ಟಿಲ್ಲ; ಸತೀಶ್ ಜಾರಕಿಹೊಳಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com