ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿ ರೂ ಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

ಬೈಕ್​ನಲ್ಲಿ ಬಂದು ದಯಾನಂದ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ನಿಮಗೆ ಗಿಫ್ಟ್ ಬಂದಿದೆ ಎಂದು ಕಾಟನ್ ಬಾಕ್ಸ್ ತೋರಿಸಿದ್ದಾರೆ.
Ex-MLC Dayananda Reddy kidnapped near Anekal and miscreants demand 3 crore rupees ransom
ದಯಾನಂದ ರೆಡ್ಡಿ
Updated on

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ ಬರೋಬ್ಬರಿ ಮೂರು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಸೋಮವಾರ ತಡರಾತ್ರಿ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿ ನಡೆದಿದೆ.

ದಯಾನಂದ ರೆಡ್ಡಿ ಅವರು ನಿನ್ನೆ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್​ನಿಂದ ಹೊರಟಿದ್ದರು. ಈ ವೇಳೆ ಬೈಕ್​ನಲ್ಲಿ ಬಂದು ದಯಾನಂದ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ನಿಮಗೆ ಗಿಫ್ಟ್ ಬಂದಿದೆ ಎಂದು ಕಾಟನ್ ಬಾಕ್ಸ್ ತೋರಿಸಿದ್ದಾರೆ.

ಡೋರ್​ ಲಾಕ್ ಓಪನ್ ಮಾಡುತ್ತಿದ್ದಂತೆ ಕಾರಿಗೆ ನುಗ್ಗಿರುವ ಓರ್ವ ಗನ್ ತೋರಿಸಿ ತಾನು ಹೇಳಿದ ಕಡೆ ಕಾರು ಚಲಾಯಿಸಲು ಸೂಚನೆ ನೀಡಿದ್ದಾನೆ. ಬಳಿಕ ಕೆಂಪು ಬಣ್ಣದ ಕಾರಿನಲ್ಲಿ ಮತ್ತಿಬ್ಬರು ಇವರನ್ನು ಹಿಂಬಾಲಿಸಿದ್ದಾರೆ.

Ex-MLC Dayananda Reddy kidnapped near Anekal and miscreants demand 3 crore rupees ransom
ಹೃದಯ ವಿದ್ರಾವಕ ಘಟನೆ: ಹನಿಮೂನ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್‌ ಪತನ; ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿ ಮಡಿಲಲ್ಲೇ ಪ್ರಾಣಬಿಟ್ಟ ಪೈಲಟ್!

ಅತ್ತಿಬೆಲೆಯ ಕೆಹೆಚ್​ಬಿ ಬಡಾವಣೆ ಬಳಿ ಮಾಜಿ ಎಂಎಲ್ ಸಿಯನ್ನು ಕರೆದೊಯ್ದು ಕೊಲೆ ಬೆದರಿಕೆ ಹಾಕಲಾಗಿದ್ದು, ನಿನ್ನ ಹತ್ಯೆಗೆ 10 ಕೋಟಿ ಸುಪಾರಿ ಕೊಟ್ಟಿದ್ದಾರೆ ಎಂದು ದಯಾನಂದರೆಡ್ಡಿ ಕುತ್ತಿಗೆಗೆ ಗನ್ ಇಟ್ಟು ದುಷ್ಕರ್ಮಿಗಳು ಹೆದರಿಸಿದ್ದಾರೆ.

ಈ ವೇಳೆ ಹಣ ನಾನೇ ಕೊಡುತ್ತೇನೆ, ಕೊಲ್ಲಬೇಡಿ ಎಂದು ದಯಾನಂದ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ಮೊದಲು 3 ಕೋಟಿ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಬಳಿಕ 2 ಕೋಟಿ ರೂ.ಗೆ ಒಪ್ಪಿಕೊಂಡಿದ್ದಾರೆ. ಆದರೆ ಸದ್ಯ ಹಣ ಇಲ್ಲ, ಬೆಳಗ್ಗೆ ಬ್ಯಾಂಕ್ ಗೆ ತೆರೆದ ಬಳಿಕ ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಹೇಳಿದ್ದಾರೆ. ಹಣ ಡ್ರಾ ಮಾಡಿದ ಬಳಿಕ ಕರೆ ಮಾಡುವಂತೆ ಸೂಚಿಸಿ ಆರೋಪಿಗಳು ಅವರನ್ನು ಬಿಟ್ಟು ಕಳುಹಿಸಿದ್ದಾರೆ.

ಈ ಸಂಬಂಧ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com