

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಗಳ ಬದಲಾವಣೆ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಪೀಕರ್ ಯುಟಿ ಖಾದರ್ ಸಚಿವರಾಗುವ ಸಾಧ್ಯತೆಯಿದೆ.
ಜೂನ್ 18 ರ ಪರಿಷತ್ ಚುನಾವಣೆಯ ನಂತರ ಮೇಲ್ಮನೆಯಲ್ಲಿ ಪಕ್ಷಕ್ಕೆ ಬಹುಮತ ದೊರೆಯುವುದರಿಂದ ಕಾಂಗ್ರೆಸ್ ಪಕ್ಷದವರೇ ಸಭಾಪತಿ ಆಗಬಹುದು ಎನ್ನಲಾಗುತ್ತಿದೆ.
2023 ರಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಖಾದರ್ ಅವರನ್ನು ಸಭಾಪತಿಯನ್ನಾಗಿ ಮಾಡಲಾಗಿತ್ತು. ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಂಪುಟ ಸ್ಥಾನ ದೊರೆಯುವ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ 2023 ರಿಂದ ಸಚಿವ ಸಂಪುಟ ಪುನರ್ ರಚನೆಯಾಗಿರಲಿಲ್ಲ.
ಸಿದ್ದರಾಮಯ್ಯ ರಾಜೀನಾಮೆ ನೀಡಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಜ್ಜಾಗಿರುವುದರಿಂದ, ಹೊಸ ಸಚಿವ ಸಂಪುಟ ರಚನೆಯಾಗಲಿದೆ. ಖಾದರ್ ಸಚಿವರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. "ವಿಧಾನಸಭೆಯ ಬಜೆಟ್ ಅಧಿವೇಶನದಿಂದಲೂ ಖಾದರ್ ಸಂಪುಟಕ್ಕೆ ಸೇರಲು ಸಿದ್ಧತೆ ನಡೆಸುತ್ತಿದ್ದರು. ಅವರು ತಮ್ಮ ಅವಧಿಯ ಮಧ್ಯದಲ್ಲಿ ಶಾಸಕರೊಂದಿಗೆ ಫೋಟೋ ಸೆಷನ್ ಕೂಡ ನಡೆಸಿದ್ದರು. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದು" ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಹಿರಿಯ ಕಾಂಗ್ರೆಸ್ ಶಾಸಕರಾದ ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ ಮತ್ತು ಎಚ್.ಕೆ.ಪಾಟೀಲ್ ಅವರ ಹೆಸರುಗಳು ಸ್ಪೀಕರ್ ಹುದ್ದೆಗೆ ಕೇಳಿಬರುತ್ತಿದ್ದವು, ಆದರೆ ಅವರು ಆಸಕ್ತಿ ತೋರಿಸಲಿಲ್ಲ. ಈ ಮಧ್ಯೆ ಮುಂಬರುವ ವಿಧಾನ ಪರಿಷತ್ ಚುನಾವಣೆ 75 ಸದಸ್ಯರ ಮೇಲ್ಮನೆಯಲ್ಲಿ ಕಾಂಗ್ರೆಸ್ ಸ್ಥಾನವನ್ನು ಬಲಪಡಿಸುವ ನಿರೀಕ್ಷೆಯಿದೆ.
ಇದರಿಂದಾಗಿ ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನಕ್ಕೆ ಹಕ್ಕು ಮಂಡಿಸುವ ಸಾಧ್ಯತೆಯಿದೆ. ಪ್ರಸ್ತುತ, ಪಕ್ಷದ ನಾಯಕರು ಶಿವಕುಮಾರ್ ಸಂಪುಟಕ್ಕೆ ಸೇರಿಸಿಕೊಳ್ಳಬೇಕಾದ ಶಾಸಕರ ಹೆಸರನ್ನು ಅಂತಿಮಗೊಳಿಸುವಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಎಂಎಲ್‌ಸಿಯೊಬ್ಬರು ಹೇಳಿದ್ದಾರೆ.
ಜೂನ್ 18 ರ ಎಂಎಲ್‌ಸಿ ಚುನಾವಣೆಯ ನಂತರ, ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷವು ಸಭಾಪತಿ ಹುದ್ದೆಗೆ ಹೆಸರುಗಳನ್ನು ಅಂತಿಮಗೊಳಿಸುತ್ತದೆ" ಎಂದು ಎಂಎಲ್‌ಸಿ ಹೇಳಿದರು. ಉಪಮುಖ್ಯಮಂತ್ರಿ ಅಥವಾ ಸಚಿವ ಸ್ಥಾನಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
Advertisement