

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ, ಪ್ರಸ್ತುತ 'ಬೆಂಗಳೂರು ಬಿಸಿನೆಸ್ ಕಾರಿಡಾರ್' ಅಧ್ಯಕ್ಷರಾಗಿರುವ ಎಲ್.ಕೆ ಅತೀಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗು ಇತರ ಭತ್ತೆಗಳು ಈ ಹುದ್ದೆಗೆ ಸಿಗಲಿವೆ ಎಂದು ಆದೇಶದಲ್ಲಿ ಹೇಳಲಾಗಿದೆ.
Advertisement