ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ಆಂಧ್ರದ ಒಂದೇ ಕುಟುಂಬದ ಮೂವರು ಸೇರಿ 7 ಮಂದಿ ದುರ್ಮರಣ!

ತುಮಕೂರು, ಚಾಮರಾಜನಗರ: ಮತ್ತು ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ಏಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ಆಂಧ್ರದ ಒಂದೇ ಕುಟುಂಬದ ಮೂವರು ಸೇರಿ 7 ಮಂದಿ ದುರ್ಮರಣ!
Updated on

ಬೆಂಗಳೂರು: ತುಮಕೂರು, ಚಾಮರಾಜನಗರ: ಮತ್ತು ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ಏಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಮೂರು ದುರಂತಗಳು ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ತುಮಕೂರಿನ ಚಿಕ್ಕನಾಯಕನಹಳ್ಳಿಯ ಹುಳಿಯಾರು ಗ್ರಾಮದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ಆಂಧ್ರದ ಒಂದೇ ಕುಟುಂಬದ ಮೂವರು ಸೇರಿ 7 ಮಂದಿ ದುರ್ಮರಣ!
ಮಡಿಕೇರಿ ಜೈಲಿನಲ್ಲಿ ಭೀಕರ ಕೊಲೆ: ಹಳೇ ವೈಷಮ್ಯಕ್ಕೆ ವಿಚಾರಣಾಧೀನ ಕೈದಿ ಬಲಿ..!

ಮತ್ತೊಂದೆಡೆ ಚಾಮರಾಜನಗರದ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ 70 ವರ್ಷದ ಮುಬಾರಕ್ (70) ಹಾಗೂ ಕೇವಲ 7 ತಿಂಗಳ ಹಸುಗೂಸು ಸ್ಥಳದಲ್ಲೇ ಕೊನೆಯುಸಿರೆಳೆದಿವೆ. ಇನ್ನು ಐವರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದೆ.

ಇನ್ನೊಂದೆಡೆ, ಚಿಕ್ಕಬಳ್ಳಾಪುರದ ಗುಡಿಬಂಡೆಯ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಟಿವಿಎಸ್ ಎಕ್ಸೇಲ್ ಗೆ APSRTC ಡಿಕ್ಕಿ ಹೊಡೆದಿದ್ದು ಪರಿಣಾಮ ವೃದ್ಧ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಲಕ್ಷ್ಮಣ (75) ಹಾಗೂ ಅವರ ಪತ್ನಿ ರತ್ನಮ್ಮ (70) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com