ನಿಯಮ ಉಲ್ಲಂಘಿಸಿದ ಕಾಂಪೌಂಡ್ ಗೋಡೆಗಳ ವಿರುದ್ಧ ಕಠಿಣ ಕ್ರಮಕ್ಕೆ GBA ಮುಂದು..!

ಸಭೆಯಲ್ಲಿ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಮಳೆನೀರು ಚರಂಡಿಗಳ ಹೂಳೆತ್ತುವಿಕೆ, ಜಂಕ್ಷನ್ ಸುಧಾರಣಾ ಯೋಜನೆಗಳು, ರಸ್ತೆ ಪುನಃಸ್ಥಾಪನೆ, ಕಟ್ಟಡ ಸುರಕ್ಷತಾ ಕ್ರಮಗಳು, ಸಹಾಯ (Sahaya) ದೂರುಗಳ ವಿಲೇವಾರಿ ಸೇರಿದಂತೆ ಹಲವು ವಿಷಯಗಳ ಪರಿಶೀಲನೆ ನಡೆಸಲಾಯಿತು.
Bengaluru East City Corporation Commissioner DS Ramesh during an inspection.
ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
Updated on

ಬೆಂಗಳೂರು: ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾದ ಹಾಗೂ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುವಂತಹ ಕಾಂಪೌಂಡ್ ಗೋಡೆಗಳು ಮತ್ತು ಅನಧಿಕೃತ ಕಟ್ಟಡಗಳ ವಿರುದ್ಧ ತಕ್ಷಣವೇ ನೋಟಿಸ್ ಜಾರಿ ಮಾಡಿ, ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ (BECC) ಆಯುಕ್ತರಾದ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.

ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಎಂಜಿನಿಯರಿಂಗ್ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಿಯಮ ಪಾಲಿಸದ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಮಳೆನೀರು ಚರಂಡಿಗಳ ಹೂಳೆತ್ತುವಿಕೆ, ಜಂಕ್ಷನ್ ಸುಧಾರಣಾ ಯೋಜನೆಗಳು, ರಸ್ತೆ ಪುನಃಸ್ಥಾಪನೆ, ಕಟ್ಟಡ ಸುರಕ್ಷತಾ ಕ್ರಮಗಳು, ಸಹಾಯ (Sahaya) ದೂರುಗಳ ವಿಲೇವಾರಿ ಸೇರಿದಂತೆ ಹಲವು ವಿಷಯಗಳ ಪರಿಶೀಲನೆ ನಡೆಸಲಾಯಿತು.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ನಾಗರಿಕ ಕಾಮಗಾರಿಗಳು ಪೂರ್ಣಗೊಂಡಿರುವ ರಸ್ತೆಗಳಲ್ಲಿ ಜೂನ್ 9ರೊಳಗೆ ಡಾಂಬರೀಕರಣ ಕಾಮಗಾರಿ ಮುಗಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ಸೂಚಿಸಲಾಯಿತು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.

ರಸ್ತೆ ಸುರಕ್ಷತೆ ಹೆಚ್ಚಿಸುವ ಉದ್ದೇಶದ ಸುರಕ್ಷಾ-75 ಯೋಜನೆ ಅಡಿಯಲ್ಲಿ ಕೈಗೊಳ್ಳಲಿರುವ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗಳ ವಿನ್ಯಾಸವನ್ನು ತ್ವರಿತವಾಗಿ ಅಂತಿಮಗೊಳಿಸಿ ಕಾಮಗಾರಿ ಆರಂಭಿಸುವಂತೆ ಮುಖ್ಯ ಎಂಜಿನಿಯರ್‌ಗೆ ಸೂಚಿಸಲಾಗಿದೆ.

Bengaluru East City Corporation Commissioner DS Ramesh during an inspection.
ಕುಸಿಯುವ ಅಪಾಯದಲ್ಲಿರುವ ಶಿಥಿಲಗೊಂಡ ಕಟ್ಟಡಗಳನ್ನು ಕೆಡವಲು ಜಿಬಿಎ ಮುಖ್ಯ ಆಯುಕ್ತ ಆದೇಶ

ಮಳೆಗಾಲದ ಹಿನ್ನೆಲೆಯಲ್ಲಿ ಕಾಂಕ್ರೀಟ್ ಹಾಗೂ ಮಣ್ಣಿನ ಮಳೆನೀರು ಚರಂಡಿಗಳ ಹೂಳೆತ್ತುವಿಕೆ ಮತ್ತು ನಿರ್ವಹಣಾ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳುವಂತೆ ಆಯುಕ್ತರು ಆದೇಶಿಸಿದ್ದಾರೆ.

ಚರಂಡಿಗಳಲ್ಲಿ ಸಂಗ್ರಹವಾಗಿರುವ ಹೂಳು, ಕಸ, ಪ್ಲಾಸ್ಟಿಕ್ ತ್ಯಾಜ್ಯ ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ನಗರ ಸಂಚಾರ ಪೊಲೀಸರು ಗುರುತಿಸಿರುವ ನೀರು ನಿಲ್ಲುವ ಪ್ರದೇಶಗಳಿಗೆ ವಿಶೇಷ ಆದ್ಯತೆ ನೀಡಿ ಅಗತ್ಯ ಕ್ರಮಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಹಾಗೂ ವಾಹನ ಸಂಚಾರ ಸುಗಮವಾಗಿರುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಇದೇ ವೇಳೆ, ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿ ಮಾಡಲು ಸಮಗ್ರ ಕಾರ್ಯಯೋಜನೆ ರೂಪಿಸುವಂತೆ ಆಯುಕ್ತರು ಸೂಚಿಸಿದ್ದು, ಕಾಮಗಾರಿಗಳನ್ನು ಶೀಘ್ರ ಆರಂಭಿಸಲು ಅಗತ್ಯ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣವೇ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com