ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video

ಇಂದು ವಿಧಾನಸೌಧಕ್ಕೆ ಸಿದ್ದರಾಮಯ್ಯ ಬಂದಿದ್ದರು. ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ.
DK Shivakumar-Siddaramaiah
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Updated on

ಬೆಂಗಳೂರು: ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಗಾದಿಗೇರಿದ್ದು ಖಾತೆ ಹಂಚಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್​​ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ.

ಇಂದು ವಿಧಾನಸೌಧಕ್ಕೆ ಸಿದ್ದರಾಮಯ್ಯ ಬಂದಿದ್ದರು. ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸಿದ್ದರಾಮಯ್ಯ ಒಂಟಿಯಾಗಿ ಓಡಾಡುತ್ತಿದ್ದರು. ಇನ್ನು ಕುತೂಹಲಕಾರಿ ವಿಷಯವೆಂದರೆ ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾದರೂ ಒಬ್ಬರಿಗೊಬ್ಬರು ಮಾತನಾಡಿಸದೇ ಮುಂದೆ ಹೋಗಿದ್ದಾರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com