ಜನರ ಅಹವಾಲು, ಎನ್‌ಆರ್‌ಐಗಳಿಗೆ ಹೊಸ ಸಚಿವಾಲ ಸ್ಥಾಪನೆ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಪ್ರತಿದಿನ 2-3 ಪ್ರತಿಭಟನೆಗಳು ನಡೆಯುತ್ತಿದ್ದು, ಅವುಗಳ ಬೇಡಿಕೆಗಳಲ್ಲಿ ಯಾವುದು ಕಾನೂನುಬದ್ಧ ಮತ್ತು ಯಾವುದು ಅಲ್ಲ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು.
Chief Minister D K Shivakumar greets participants in a meeting of top bureaucrats and police officers at the Vidhana Soudha in Bengaluru on Thursday.
ವಿಧಾನಸೌಧದಲ್ಲಿ ನಡೆದ ಹಿರಿಯ ಆಡಳಿತಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದಿಸಿದರು.
Updated on

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಹೊಸ ಸಚಿವಾಲಯ (Secretariat) ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಡಿಜಿಪಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನರ ಅಹವಾಲುಗಳನ್ನು ಆಲಿಸಲು ಹೊಸ ಸಚಿವಾಲಯವನ್ನು ರಚಿಸಲಾಗುವುದು. ಜನರ ಮನವಿ ಸ್ವೀಕರಿಸಿ, ಅವರ ಭಾವನೆಗಳು ಹಾಗೂ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು” ಎಂದು ಹೇಳಿದರು.

ಪ್ರತಿದಿನ 2-3 ಪ್ರತಿಭಟನೆಗಳು ನಡೆಯುತ್ತಿದ್ದು, ಅವುಗಳ ಬೇಡಿಕೆಗಳಲ್ಲಿ ಯಾವುದು ಕಾನೂನುಬದ್ಧ ಮತ್ತು ಯಾವುದು ಅಲ್ಲ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಎನ್‌ಆರ್‌ಐಗಳಿಗಾಗಿ ಪ್ರತ್ಯೇಕ ಸಚಿವಾಲಯ

ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ (NRI) ಸಮಸ್ಯೆಗಳನ್ನು ಪರಿಹರಿಸಲು ಪ್ರತ್ಯೇಕ ಸಚಿವಾಲಯವನ್ನೂ ಸ್ಥಾಪಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ಘೋಷಿಸಿದರು.

ಮತದಾರರ ಹಕ್ಕು ಕಳೆದುಕೊಳ್ಳದಂತೆ ಸೂಚನೆ

ವಿಶೇಷ ಮತದಾರರ ಪರಿಶೀಲನೆ (SIR) ವೇಳೆ ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕು ಕಳೆದುಕೊಳ್ಳದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಮುಖ್ಯಮಂತ್ರಿಯಿಂದ ಹಿಡಿದು ಉಪ ಮುಖ್ಯಮಂತ್ರಿ ಹಾಗೂ ಎಲ್ಲ ಮತದಾರರೂ ಗಣತಿ (Enumeration) ನಮೂನೆಯನ್ನು ಭರ್ತಿ ಮಾಡಿ, ಸಹಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದರೆ ಅವರು ಮತದಾನದ ಹಕ್ಕು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ಅರಿವು ಮೂಡಿಸಬೇಕು. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡುವಂತೆ ನಾನು ಸೂಚಿಸಿದ್ದೇನೆ ಎಂದು ಹೇಳಿದರು.

ಇತರ ರಾಜ್ಯಗಳಲ್ಲಿ ಲಕ್ಷಾಂತರ ಜನರು ತಮ್ಮ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಅದು ನಡೆಯಬಾರದು. ಅಗತ್ಯವಿರುವ ಕಡೆಗಳಲ್ಲಿ ಸಹಾಯ ಕೇಂದ್ರಗಳನ್ನು (Help Desk) ಸ್ಥಾಪಿಸಬೇಕು ಎಂದರು.

ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಒತ್ತು

ಅಧಿಕಾರಿಗಳಿಗೆ ಪಾರದರ್ಶಕತೆ ಮತ್ತು ಸಕಾರಾತ್ಮಕ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಶಾಸಕರು, ಸಚಿವರು ಅಥವಾ ತಮ್ಮ ಕಚೇರಿಯಿಂದಲೂ ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯಬಾರದು ಎಂದು ಹೇಳಿದರು.

ನಮ್ಮ ಸರ್ಕಾರ ಜಾತಿ, ಧರ್ಮ ಅಥವಾ ಇತರ ಯಾವುದೇ ಆಧಾರದ ಒತ್ತಡಗಳಿಗೆ ಮಣಿಯುವುದಿಲ್ಲ. ಆಡಳಿತ ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತವಾಗಿರಬೇಕು. ಎಲ್ಲಾ ಇಲಾಖೆಗಳು 15 ದಿನಗಳೊಳಗೆ ಕಾರ್ಯಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು.

CSR ನಿಧಿಗಳ ಬಳಕೆ ಕುರಿತು ಮಾಹಿತಿ ಕೊರತೆ

ಕರ್ನಾಟಕದಲ್ಲಿ ವರ್ಷಕ್ಕೆ ಸುಮಾರು ₹8,000 ಕೋಟಿ ಯಿಂದ ₹8,500 ಕೋಟಿ ವರೆಗೆ ಲಭ್ಯವಾಗುವ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳನ್ನು ಹೇಗೆ ಬಳಸಲಾಗುತ್ತಿದೆ ಎಂಬುದರ ಕುರಿತು ಸರ್ಕಾರದ ಬಳಿ ಸಮಗ್ರ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಈ ನಿಧಿಗಳನ್ನು ಹೇಗೆ ಬಳಸಲಾಗುತ್ತಿದೆ ಎಂಬ ಮಾಹಿತಿ ಸರ್ಕಾರಕ್ಕೆ ಅಗತ್ಯವಾಗಿದೆ. ಈಗಾಗಲೇ ಪ್ರತಿ ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದು ಕೆಪಿಎಸ್ (KPS) ಶಾಲೆ ನಿರ್ಮಿಸುವುದಾಗಿ ಘೋಷಿಸಿದ್ದೇವೆ. ಪ್ರಾಥಮಿಕ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಹಕಾರ ಕೋರಲು ಪತ್ರಗಳನ್ನು ಕಳುಹಿಸಲಾಗುವುದು ಎಂದರು.

ತಾಲ್ಲೂಕು ಮಟ್ಟದಲ್ಲಿ ರೌಡಿಸಂ ನಿಯಂತ್ರಣಕ್ಕೆ ವಿಶೇಷ ಪೊಲೀಸ್ ತಂಡ

ರಾಜ್ಯದಲ್ಲಿ ರೌಡಿಸಂ ನಿಯಂತ್ರಣಕ್ಕಾಗಿ ಪ್ರತಿಯೊಂದು ತಾಲ್ಲೂಕು ಮಟ್ಟದಲ್ಲೂ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ಘೋಷಿಸಿದರು.

ಪ್ರತಿ ತಾಲ್ಲೂಕಿನಲ್ಲಿ ರೌಡಿಸಂ ತಡೆಗಟ್ಟಲು ವಿಶೇಷ ಪೊಲೀಸ್ ತಂಡಗಳು ಇರಬೇಕು. ಸಮಾಜಘಾತುಕ ಅಂಶಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗದಂತೆ ಈ ತಂಡಗಳು ನಿಗಾ ವಹಿಸಬೇಕು. ಹಳೆಯ ಮತ್ತು ಹೊಸ ರೌಡಿಗಳ ಚಲನವಲನಗಳ ಮೇಲೂ ಕಣ್ಣಿಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com