ಹಿಜಾಬ್ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ಯತ್ನಾಳ್, ಬೆಂಬಲಿಗರು ಪೊಲೀಸ್ ವಶಕ್ಕೆ

ಯತ್ನಾಳ್ ಮತ್ತು ಅವರ ಬೆಂಬಲಿಗರು, ಇಂದು ನಗರದ ದರ್ಬಾರ್ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಂತರ ಅವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
Basangouda Patil Yatnal
ಬಸನಗೌಡ ಪಾಟೀಲ್ ಯತ್ನಾಳ್
Updated on

ವಿಜಯಪುರ: ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ ಕರ್ನಾಟಕ ಸರ್ಕಾರದ ಹೊಸ ಆದೇಶವನ್ನು ವಿರೋಧಿಸಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು.

ಶಾಲಾ, ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಯತ್ನಾಳ್ ಮತ್ತು ಅವರ ಬೆಂಬಲಿಗರು, ಇಂದು ನಗರದ ದರ್ಬಾರ್ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಂತರ ಅವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಯತ್ನಾಳ್ ತಮ್ಮ ಬೆಂಬಲಿಗರೊಂದಿಗೆ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ದರ್ಬಾರ್ ಶಿಕ್ಷಣ ಸಂಸ್ಥೆಯ ಆವರಣ ತಲುಪಿದ ನಂತರ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.

Basangouda Patil Yatnal
ಶಾಲೆಯಲ್ಲಿ 'Yes Sir' ಬದಲು 'ಜೈ ಶ್ರೀರಾಮ್': ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

ಆದರೆ, ಪೊಲೀಸರು ಮಧ್ಯಪ್ರವೇಶಿಸಿ ಕ್ರಮವನ್ನು ತಡೆದರು. ನಂತರ ಯತ್ನಾಳ್ ಬೆಂಬಲಿಗರು ಮತ್ತು ಪೊಲೀಸ್ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ಸ್ವಲ್ಪ ಸಮಯದವರೆಗೆ ಉದ್ವಿಗ್ನಗೊಂಡಿದ್ದು, ಬೆಂಬಲಿಗರು ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಯತ್ನಾಳ್ ಸ್ಥಳಕ್ಕೆ ಬಂದಾಗ, ಕೇಸರಿ ಶಾಲು ವಿತರಿಸುವ ಮೊದಲು ಅವರನ್ನು ಮತ್ತು ಅವರ ಹಲವಾರು ಬೆಂಬಲಿಗರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಯಿತು.

ಹೆಚ್ಚುವರಿ ಪಡೆಗಳನ್ನು ಪ್ರದೇಶದಲ್ಲಿ ನಿಯೋಜಿಸಿದ ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 14 ರಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸುವ ಫೆಬ್ರವರಿ 5, 2022 ರ ಆದೇಶವನ್ನು ಹಿಂತೆಗೆದುಕೊಳ್ಳುವ ಮೂಲಕ ಹಿಜಾಬ್‌ಗೆ ಅನುಮತಿ ನೀಡಿತ್ತು. ಪರಿಷ್ಕೃತ ಮಾರ್ಗಸೂಚಿಗಳು ಹಿಜಾಬ್ ಮಾತ್ರವಲ್ಲದೆ ಪವಿತ್ರ ದಾರ(ಜನಿವಾರ), ರುದ್ರಾಕ್ಷಿ ಮತ್ತು ಶಿವ ಮಣಿಗಳಂತಹ ಇತರ ಸಾಂಪ್ರದಾಯಿಕವಾಗಿ ಧರಿಸಿರುವ ಧಾರ್ಮಿಕ ಸಂಕೇತಗಳಿಗೆ ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com