ಇನ್ನೂ ಸಾಕಷ್ಟು ಹುದ್ದೆಗಳು ಖಾಲಿಯಿವೆ: ಸಂಪುಟದಲ್ಲಿ 'ಸ್ತ್ರೀಶಕ್ತಿ' ಗೆ ಆದ್ಯತೆ ನೀಡದ ಟೀಕೆಗೆ ಸಿಎಂ ಡಿಕೆಶಿ ಉತ್ತರ

ನಾವು ಮಹಿಳೆಯರಿಗಾಗಿ ಎಷ್ಟೆಲ್ಲಾ ಯೋಜನೆಗಳನ್ನು ಪರಿಚಯಿಸಿದ್ದೇವೆ ನೋಡಿ. ಮಹಿಳೆಯರನ್ನು ಹೇಗೆ ಸಬಲೀಕರಣಗೊಳಿಸುವುದು ಮತ್ತು ಬೆಂಬಲಿಸುವುದು ಎಂಬುದರ ಕುರಿತು ನಾವು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ ಎಂದಿದ್ದಾರೆ.
DK Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಮೊದಲ ಕಂತಿನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಆದ್ಯತೆ ನೀಡದಿರುವುದರ ಕುರಿತು ಬಿಜೆಪಿ ಟೀಕೆಗೆ ಉತ್ತರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇನ್ನೂ ಬಹಳಷ್ಟು ಹುದ್ದೆಗಳು ಖಾಲಿ ಇವೆ, ನೋಡೋಣ ಎಂದಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಹಾಗೂ ಇತರೆ 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಮೊದಲ ಕಂತಿನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದಕ್ಕೆ ಸಾಕಷ್ಟು ಟೀಕೆಗಳು ಎದುರಾಗಿವೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, 'ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ. ನಾವೆಲ್ಲವೂ ಒಗ್ಗಟ್ಟಾಗಿದ್ದೇವೆ. ಜನರಿಗೋಸ್ಕರ ಮಾಡುವ ಕೆಲಸವನ್ನು ಒಬ್ಬನಿಂದಲೇ ಮಾಡಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆಯೂ ಮುಖ್ಯಮಂತ್ರಿ ಗಮನ ಸೆಳೆದರು. ನಾವು ಮಹಿಳೆಯರಿಗಾಗಿ ಎಷ್ಟೆಲ್ಲಾ ಯೋಜನೆಗಳನ್ನು ಪರಿಚಯಿಸಿದ್ದೇವೆ ನೋಡಿ. ಮಹಿಳೆಯರನ್ನು ಹೇಗೆ ಸಬಲೀಕರಣಗೊಳಿಸುವುದು ಮತ್ತು ಬೆಂಬಲಿಸುವುದು ಎಂಬುದರ ಕುರಿತು ನಾವು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ ಎಂದಿದ್ದಾರೆ.

DK Shivakumar
ಮಹಿಳಾ ಸಚಿವರೇ ಇಲ್ಲದ ಡಿ.ಕೆ ಶಿವಕುಮಾರ್ ಸಂಪುಟ: ರಾಜಕೀಯ ರಂಗದಲ್ಲಿ ಬಿಸಿಬಿಸಿ ಚರ್ಚೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com