

ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.
ಇದೇ ತಿಂಗಳ 18ರಂದು 7 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್ ಹಾಗೂ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್ ಕಳೆದ ಬುಧವಾರ ನಾಲ್ವರು ಅಭ್ಯರ್ಥಿಗಳ ಹೆಸರು ಘೋಷಿಸಿತ್ತು. ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಪ್ತ ವಿನಯ್ ಕಾರ್ತಿಕ್ ಹೆಸರು ಘೋಷಿಸುವ ಮೂಲಕ ಮೇಲ್ಮನೆಗೆ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ.
ವಿಧಾನಸಭೆಯಲ್ಲಿ 136 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ 4 ಸ್ಥಾನ ಗೆಲ್ಲಬಹುದು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಿಂದ ಸುಲಭವಾಗಿ ಇಬ್ಬರು ಅಭ್ಯರ್ಥಿಗಳು ಗೆಲ್ಲಬಹುದು. ಆದರೆ, ಕಾಂಗ್ರೆಸ್‌ನ ಈ ನಡೆ ತೀವ್ರ ಕುತೂಹಲ ಕೆರಳಿಸಿದೆ.
Advertisement