ಸಚಿವ ಸಂಪುಟದಲ್ಲಿ ಜಮೀರ್ ಕೈಬಿಟ್ಟಿದ್ದಕ್ಕೆ ಅಸಮಾಧಾನ: ಮುಸ್ಲಿಮರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಅಂಜುಮನ್-ಇ-ಇಸ್ಲಾಂ ಆಗ್ರಹ

ರಾಜ್ಯ ಸರ್ಕಾರ ಪ್ರಕಟಿಸಿದ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೈಬಿಟ್ಟ ಹಿನ್ನೆಲೆ ಆಗ್ರಹಗಳು ವ್ಯಕ್ತವಾಗುತ್ತಿವೆ.
Supporters of former minister Zameer Ahmed Khan stage a protest demanding DCM post for him at Freedom Park in Bengaluru on Friday.
ಜಮೀರ್ ಪರ ಬೆಂಬಲಿಗರ ಪ್ರತಿಭಟನೆ
Updated on

ಧಾರವಾಡ: ರಾಜ್ಯ ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ಕಲ್ಪಿಸುವುದರ ಜೊತೆಗೆ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಅಂಜುಮನ್-ಇ-ಇಸ್ಲಾಂ ಸಂಘಟನೆಯ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕಟಿಸಿದ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೈಬಿಟ್ಟ ಹಿನ್ನೆಲೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯಯುತ ಪ್ರತಿನಿಧಿತ್ವ ಸಿಗಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಅಂಜುಮನ್-ಇ-ಇಸ್ಲಾಂ ಉಪಾಧ್ಯಕ್ಷ ಭಸೀರ್ ಅಹ್ಮದ್ ಜಹಾಗೀರ್ಡಾರ್ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನೂ ನಾಲ್ವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿಯಾಗಿ ಮುಸ್ಲಿಂ ಸಮುದಾಯಕ್ಕೆ ಐದು ಸಚಿವ ಸ್ಥಾನಗಳನ್ನು ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Supporters of former minister Zameer Ahmed Khan stage a protest demanding DCM post for him at Freedom Park in Bengaluru on Friday.
ಪಕ್ಷ ವಿರೋಧಿ ಚಟುವಟಿಕೆಗೆ ಬೆಲೆ ತೆತ್ತ ಜಮೀರ್: ಡಿ.ಕೆ ಶಿವಕುಮಾರ್ ಸಚಿವ ಸಂಪುಟದಿಂದ ಸಿದ್ದು ಆಪ್ತ ಹೊರಕ್ಕೆ!

ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಇತರ ವಂಚಿತ ಸಮುದಾಯಗಳು ಕಾಂಗ್ರೆಸ್ ಪಕ್ಷದ ಪ್ರಮುಖ ಆಧಾರಸ್ತಂಭಗಳಾಗಿದ್ದು, ಸರ್ಕಾರದಲ್ಲೂ ಅವರಿಗೆ ಸಮಾನ ಪ್ರಾತಿನಿಧ್ಯ ದೊರಕಬೇಕು ಎಂದು ವಾದಿಸಿದರು.

ಇದೇ ವೇಳೆ ಜಮೀರ್ ಅಹ್ಮದ್ ಖಾನ್ ವಿರುದ್ಧ ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮೊದಲ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷವು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರ್ ಮಾತನಾಡಿ, ಮುಸ್ಲಿಮರು, ದಲಿತರು ಮತ್ತು ಇತರೆ ಹಿಂದುಳಿದ ವರ್ಗಗಳು ಕಾಂಗ್ರೆಸ್ ಪಕ್ಷದ ಪ್ರಮುಖ ಮತಬ್ಯಾಂಕ್ ಆಗಿದ್ದು, ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಪ್ರಾತಿನಿಧ್ಯ ಸಿಗುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com