ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ ನಿಂದನೆ, ಅವಹೇಳನ ಆರೋಪ; ವ್ಯಕ್ತಿಯ ಬಂಧನ!

ಆರೋಪಿಯು ಶನಿವಾರ 'ನಮ್ಮ ಕಾರ್ಲಾ' ಫೇಸ್‌ಬುಕ್ ಪುಟದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಹಾಕಿದ್ದರು.ಈ ಸಂಬಂಧ ಸುರೇಶ ಚೇತನಹಳ್ಳಿ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಾರ್ಕಳ ಪೊಲೀಸರು ತಿಳಿಸಿದ್ದಾರೆ.
Accused Sudheer Bangera
ಆರೋಪಿ ಸುಧೀರ ಬಂಗೇರ
Updated on

ಉಡುಪಿ: ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ ನಿಂದನೆ ಮಾಡಿ. ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದ ಮೇಲೆ ಕಾರ್ಕಳ ಪೊಲೀಸರು 48 ವರ್ಷದ ಸುಧೀರ್ ಬಂಗೇರ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಆರೋಪಿಯು ಶನಿವಾರ 'ನಮ್ಮ ಕಾರ್ಲಾ' ಫೇಸ್‌ಬುಕ್ ಪುಟದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಹಾಕಿದ್ದರು.ಈ ಸಂಬಂಧ ಸುರೇಶ ಚೇತನಹಳ್ಳಿ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಾರ್ಕಳ ಪೊಲೀಸರು ತಿಳಿಸಿದ್ದಾರೆ.

ಕಾರ್ಕಳದ ಕೆರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ, ನಮ್ಮ ಕಾರ್ಲ ಫೇಸ್ ಬುಕ್ ಖಾತೆಯಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪೋಟೋ ಹಾಕಿ ಅದರಲ್ಲಿ RSS ಇನ್ನು ಎರಡು ವರ್ಷಗಳ ಅವಧಿ ಕೋಮು ವಾದವನ್ನು ಉಸಿರಾಡುವುದಿಲ್ಲ.ಕಾರಣ ಗೃಹ ಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ ಎಂಬ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿತ್ತು.

ಈ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ದೂರುದಾರರು, ದಲಿತ ಸಮುದಾಯದಿಂದ ಬಂದ ಗೃಹ ಸಚಿವರಿಗೆ ಜಾತಿ ನಿಂದನೆ ಮಾಡಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ. ಆರೋಪಿಯು ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಸಚಿವರ ವಿರುದ್ಧ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

Accused Sudheer Bangera
ಕಾನೂನು ಉಲ್ಲಂಘಿಸಿದರೆ ಯಾರನ್ನೂ ಬಿಡಲ್ಲ, ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಅವರ ದೂರಿನ ಆಧಾರದ ಮೇಲೆ, ಕಾರ್ಕಳ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com