ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬಂಧನ; ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಜೂನ್ 5 ರಂದು ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಡೆದು, ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು.
Representational image
ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾದೊಂದಿಗೆ ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಜೂನ್ 5 ರಂದು ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಡೆದು, ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬೆಂಗಳೂರು ಕಸ್ಟಮ್ಸ್, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 10.20 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಬೆಲೆ ₹3.57 ಕೋಟಿ ಆಗಿದೆ ಎಂದು ತಿಳಿಸಿದೆ.

ಜೂನ್ 4 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 6.66 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ಪ್ರಕರಣಗಳಲ್ಲಿ, ಗುರುತನ್ನು ಬಹಿರಂಗಪಡಿಸದ ಆರೋಪಿಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com