ಜಮೀರ್ ಸಮರ್ಥ ನಾಯಕ, ಆದ್ರೂ ಮೊದಲ ಹಂತದಲ್ಲಿ ಸಚಿವ ಸ್ಥಾನ ಯಾಕೆ ಕೈತಪ್ಪಿತೋ ಗೊತ್ತಿಲ್ಲ: ಡಿಸಿಎಂ ಜಿ ಪರಮೇಶ್ವರ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸಿದ ಸಮಯದಲ್ಲೇ, ಮೊದಲ ಹಂತದಲ್ಲಿ 13 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು.
G Parameshwara
ಗೃಹ ಸಚಿವ ಜಿ ಪರಮೇಶ್ವರ
Updated on

ತುಮಕೂರು: ಕಾಂಗ್ರೆಸ್ ಶಾಸಕ ಬಿಝೆಡ್ ಜಮೀರ್ ಅಹ್ಮದ್ ಖಾನ್ ಅವರು ಸಮರ್ಥ ನಾಯಕ ಆಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಸೋಮವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವರೊಬ್ಬ ಸಮರ್ಥ ನಾಯಕ, ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಸಮರ್ಥ ನಾಯಕ. ಮೊದಲ ಹಂತದಲ್ಲಿ ಅವರಿಗೆ ಏಕೆ ಸಚಿವ ಸ್ಥಾನ ಕೈತಪ್ಪಿತು ಎಂಬುದು ನಮಗೆ ತಿಳಿದಿಲ್ಲ. ಎರಡನೇ ಹಂತದಲ್ಲಿ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯದಾದ್ಯಂತ ಬೇಡಿಕೆ ಇದೆ. ಹೈಕಮಾಂಡ್ ಅದನ್ನು ಪರಿಗಣಿಸುತ್ತದೆ ಎಂದು ನನಗೆ ತಿಳಿದಿದೆ' ಎಂದು ಹೇಳಿದರು.

ಅವರು ಸಮರ್ಥ ಸಚಿವರಾಗಿದ್ದರು ಮತ್ತು ಉತ್ತಮ ಕೆಲಸ ಮಾಡಿದರು. ಅವರಿಗೆ ಸಚಿವ ಸ್ಥಾನ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಹೈಕಮಾಂಡ್ ಶೀಘ್ರದಲ್ಲೇ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯನ್ನು ಘೋಷಿಸುವುದಾಗಿ ಹೇಳಿದೆ ಎಂದು ಪರಮೇಶ್ವರ್ ತಿಳಿಸಿದರು.

'ನನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದ್ದಕ್ಕಾಗಿ ಹೈಕಮಾಂಡ್‌ಗೆ ಧನ್ಯವಾದ ಹೇಳಲು ನಾನು ದೆಹಲಿಗೆ ಹೋಗುತ್ತಿದ್ದೇನೆ' ಎಂದು ಹೇಳಿದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಮೊದಲ ಹಂತದಲ್ಲಿ 13 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು. ಶೀಘ್ರದಲ್ಲೇ ಕಾಂಗ್ರೆಸ್ ಹೈಕಮಾಂಡ್ ಎರಡನೇ ಹಂತದ ಪಟ್ಟಿಯನ್ನು ಘೋಷಿಸಲು ಸಜ್ಜಾಗಿದೆ.

G Parameshwara
ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಲಾಬಿ: ದೆಹಲಿಯಲ್ಲಿ ಬೀಡುಬಿಟ್ಟ ಜಮೀರ್; ಬೆಂಬಲಿಗರಿಂದ ತೀವ್ರ ಪ್ರತಿಭಟನೆ

ಈಮಧ್ಯೆ, ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕಾಲುವೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ ಜಿ ಪರಮೇಶ್ವರ, ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರೆಸುತ್ತದೆ ಮತ್ತು ಕೆಲಸವನ್ನು ಪುನರಾರಂಭಿಸುತ್ತದೆ ಎಂದು ಹೇಳಿದರು.

'ನಾವು ಅವರೆಲ್ಲರ ಮನವೊಲಿಸಲು ಪ್ರಯತ್ನಿಸುತ್ತೇವೆ. ಭೂಸ್ವಾಧೀನ ಪ್ರಕ್ರಿಯೆ ಸ್ವಲ್ಪ ಸ್ಥಗಿತಗೊಂಡಿತ್ತು. ಮುಖ್ಯಮಂತ್ರಿಗಳು ಈಗ ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ನಮಗೆ ಸೂಚನೆ ನೀಡಿದ್ದಾರೆ. ನಾವು ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ ಮತ್ತು ಕೆಲಸವನ್ನು ಪುನರಾರಂಭಿಸುತ್ತೇವೆ. ನಾವು ರೈತ ಸಮುದಾಯವನ್ನು ಮನವೊಲಿಸುತ್ತೇವೆ' ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರಿಗೆ ಕಂದಾಯ ಮತ್ತು ಕ್ರೀಡಾ ಖಾತೆಗಳನ್ನು ನೀಡಲಾಗಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಖಾತೆ (ಗುಪ್ತಚರ ಹೊರತುಪಡಿಸಿ), ಐಟಿ ಮತ್ತು ಬಿಟಿ ಮತ್ತು ಇ-ಆಡಳಿತ ಖಾತೆಗಳನ್ನು ನೀಡಲಾಗಿದೆ. ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆ ಜವಾಬ್ದಾರಿ ನೀಡಲಾಗಿದ್ದು, ಕೆಎಚ್ ​​ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಎಂಬಿ ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಖಾತೆಯನ್ನು ನೀಡಲಾಗಿದೆ. ಇಂಧನ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ಕೆಜೆ ಜಾರ್ಜ್ ಅವರಿಗೆ ಹಂಚಿಕೆ ಮಾಡಲಾಗಿದೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮತ್ತು ಕೇಂದ್ರ ನಗರ ಪಾಲಿಕೆಗಳು, ಬಿಡಬ್ಲ್ಯುಎಸ್ಎಸ್‌ಬಿ ಮತ್ತು ಬಿಎಂಆರ್‌ಸಿಎಲ್ ಸೇರಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿಯ ಉಸ್ತುವಾರಿ ವಹಿಸಲಿದ್ದಾರೆ. ಯುಟಿ ಖಾದರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜವಾಬ್ದಾರಿ ವಹಿಸಲಾಗಿದೆ. ಅಲ್ಲದೆ, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಮತ್ತು ಶರಣ್ ಪ್ರಕಾಶ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com